ಬೆಂಗಳೂರು, 01 ಜುಲೈ (ಹಿ.ಸ.) :
ಆ್ಯಂಕರ್ : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಮುಖ್ಯಮಂತ್ರಿ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಕರೆಸಿ ನವದೆಹಲಿಯಲ್ಲಿ ಸಭೆ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್ ಕಚೇರಿ ನಿರ್ಮಾಣದಿಂದ, ಪಕ್ಷ ಸಂಘಟನೆವರೆಗೂ ಎಲ್ಲ ಜವಾಬ್ದಾರಿಯನ್ನು ತಿಳಿಸಿದ್ದಾರೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa