ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ
ಬೆಂಗಳೂರು, 01 ಜುಲೈ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದಲ್ಲಿ ಮುಂಜಾನೆ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, 26 ರೋಗಿಗಳನ್ನು ತಕ್ಷಣವೇ ಬೇರೆ ವಿಭಾಗಕ್ಕೆ ಸ್ಥಳಾಂತರಿಸಲಾಗಿದೆ. ಬೆಂಕಿಯಿಂದ ವಿಭಾಗದ ತಳ ಮಹಡಿ ಹಾನಿಗೊಂಡಿದೆ. ಹಲವು ದಾಖಲೆಗಳು ಬೆಂ
Fire


ಬೆಂಗಳೂರು, 01 ಜುಲೈ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದಲ್ಲಿ ಮುಂಜಾನೆ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, 26 ರೋಗಿಗಳನ್ನು ತಕ್ಷಣವೇ ಬೇರೆ ವಿಭಾಗಕ್ಕೆ ಸ್ಥಳಾಂತರಿಸಲಾಗಿದೆ.

ಬೆಂಕಿಯಿಂದ ವಿಭಾಗದ ತಳ ಮಹಡಿ ಹಾನಿಗೊಂಡಿದೆ. ಹಲವು ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ.

ಕರ್ತವ್ಯದಲ್ಲಿದ್ದ ವೈದ್ಯೆ ಡಾ.ದಿವ್ಯಾ ಮತ್ತು ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ತಕ್ಷಣವೇ ಎಚ್ಚರಿಕೆ ಘೋಷಿಸಿ ರೋಗಿಗಳನ್ನು ರಕ್ಷಿಸುವ ಕಾರ್ಯಾಚರಣೆ ನಡೆಸಿ, 14 ಪುರುಷರು, 5 ಮಹಿಳೆಯರು ಮತ್ತು 7 ಮಕ್ಕಳು ಸೇರಿ ಎಲ್ಲರನ್ನೂ ಬೇರೆ ವಿಭಾಗಕ್ಕೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಐಸಿಯು ಸೇರಿ ಎಲ್ಲ ರೋಗಿಗಳನ್ನೂ 30 ನಿಮಿಷದೊಳಗೆ ಸ್ಥಳಾಂತರಿಸಿ ದೊಡ್ಡ ದುರಂತ ತಪ್ಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande