ದೊಡ್ಡಬಳ್ಳಾಪುರ ಬಳಿ ಕಾರು ಉರುಳಿ ಬಿದ್ದು ನಾಲ್ವರ ದುರ್ಮರಣ
ದೊಡ್ಡಬಳ್ಳಾಪುರ, 01 ಜುಲೈ (ಹಿ.ಸ.) : ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ಬಳಿ ಲಾರಿ ಹಿಂದಿಕ್ಕುವ ಬರದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ದೊಡ್ಡಬಳ್ಳಾಪುರದ ಕರೇನಹಳ್ಳಿಯ ನಿವಾಸಿಗಳಾಗ
Accident


ದೊಡ್ಡಬಳ್ಳಾಪುರ, 01 ಜುಲೈ (ಹಿ.ಸ.) :

ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ಬಳಿ ಲಾರಿ ಹಿಂದಿಕ್ಕುವ ಬರದಲ್ಲಿ

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ದೊಡ್ಡಬಳ್ಳಾಪುರದ ಕರೇನಹಳ್ಳಿಯ ನಿವಾಸಿಗಳಾಗಿದ್ದು, ಕಾಳಪ್ಪ, ಪುರುಷೋತ್ತಮ, ನಾರಾಯಣಪ್ಪ ಮತ್ತು ಈಶ್ವರಪ್ಪ ಎಂದು ಗುರುತಿಸಲಾಗಿದೆ. ಇವರು ದೇವಾಲಯಕ್ಕೆ ತೆರಳುವ ನಿಮಿತ್ತ 8 ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಮೃತದೇಹಗಳು ರಸ್ತೆಯಲ್ಲೇ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande