ಬಳ್ಳಾರಿ, 01 ಜುಲೈ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿರದ `ಜನ ಸ್ವರಾಜ್ಯ ಪಾರ್ಟಿ’ಯ ಮುಂದುವರಿಕೆ ಕುರಿತು ವಿಚಾರಣೆಯನ್ನು ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ನೋಂದಾಯಿತ, ಮಾನ್ಯತೆ ಪಡೆಯದ ರಾಜಕೀಯ ಪಕ್ಷವಾದ ‘ಜನ ಸ್ವರಾಜ್ಯ ಪಾರ್ಟಿ’ಯ ಅಧಿಕೃತ ಪ್ರತಿನಿಧಿಯು ಇಚ್ಛಿಸಿದಲ್ಲಿ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ, ಬೆಂಗಳೂರು ಇವರಿಗೆ 2025ರ ಜುಲೈ 18 ರೊಳಗಾಗಿ ತಮ್ಮ ಲಿಖಿತ ಮನವಿಯನ್ನು ಸಲ್ಲಿಸಬಹುದಾಗಿದೆ.
ಒಂದು ವೇಳೆ ನಿಗದಿತ ಸಮಯದೊಳಗೆ ಪಕ್ಷದಿಂದ ಯಾವುದೇ ಲಿಖಿತ ಮನವಿ ಸ್ವೀಕೃತವಾಗದೇ ಇದ್ದಲ್ಲಿ ಪಕ್ಷದ ಯಾವುದೇ ಹೇಳಿಕೆ ಇರುವುದಿಲ್ಲವೆಂದು ಪರಿಗಣಿಸಿ, ಆ ಪಕ್ಷವನ್ನು ಸಂಪರ್ಕಿಸದೇ ಚುನಾವಣಾ ಆಯೋಗದಿಂದ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್