ನಾಯಕತ್ವ ಬದಲಾವಣೆಗೆ ಅಭಿಪ್ರಾಯ ಸಂಗ್ರಹಿಸುತ್ತಿಲ್ಲ : ಸುರ್ಜೆವಾಲಾ
ಬೆಂಗಳೂರು, 01 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಅಭಿಪ್ರಾಯ ಸಂಗ್ರಹವಲ್ಲ. ಇದು ಪಕ್ಷದ ಸಂಘಟನೆ ಬಗ್ಗೆ ನಡೆದಿರೋ ಅಭಿಪ್ರಾಯ ಸಂಗ್ರಹ ಎಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿ
Surjewala


ಬೆಂಗಳೂರು, 01 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಅಭಿಪ್ರಾಯ ಸಂಗ್ರಹವಲ್ಲ. ಇದು ಪಕ್ಷದ ಸಂಘಟನೆ ಬಗ್ಗೆ ನಡೆದಿರೋ ಅಭಿಪ್ರಾಯ ಸಂಗ್ರಹ ಎಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎರಡು ದಿನಗಳಲ್ಲಿ ಮೈಸೂರು ಮತ್ತು ಬೆಂಗಳೂರು ವಿಭಾಗದ ಶಾಸಕರ ಭೇಟಿ ಮಾಡಿದ್ದೇನೆ. ಇತರ ವಿಭಾಗದ ಶಾಸಕರನ್ನು ಭೇಟಿ ಮಾಡುತ್ತೆನೆ. ನಂತರದಲ್ಲಿ ಸಂಸದರು, ಮಾಜಿ ಸಂಸದರನ್ನು ಭೇಟಿ ಮಾಡಲಾಗುವುದು. ಕಳೆದ ಎರಡು ವರ್ಷಗಳಲ್ಲಿ ಕ್ಷೇತ್ರದಲ್ಲಿ ಮಾಡಿದ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಶಾಸಕರ ಪ್ರಗತಿ ವರದಿ ಪಡೆದುಕೊಳ್ಳುತ್ತಿದ್ದೇನೆ. ಬ್ಲಾಕ್ ಕಾಂಗ್ರೆಸ್ ಸೇರಿದಂತೆ ಇತರ ವಿಭಾಗಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದರು.

ಶಾಸಕ ಆಕಾಂಕ್ಷೆಗಳು, ಬೇಡಿಕೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಅದನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಮುಂಚೂಣಿ ಘಟಕಗಳ ಬಗ್ಗೆ ಶಾಸಕರಿಂದ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಪಂಚ ಗ್ಯಾರಂಟಿಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗ್ತಿದೆ.‌ ನಾನು ನಾಳೆಯೂ ಕೂಡ ಸಭೆ ನಡೆಸಿ, ಶಾಸಕರನ್ನು, ಸಂಸದರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

ಶಾಸಕರ ಭೇಟಿ ಕುರಿತು ಪ್ರತಿಕ್ರಿಸಿರುವ ಅವರು, ಕ್ಷೇತ್ರದ ಜನರಿಗೆ ಏನು ಕೆಲಸ ಮಾಡುತ್ತಿದ್ದಾರೆ, ಪಕ್ಷ ಸಂಘಟನೆಗೆ ನಿಮ್ಮ ಸಹಕಾರ ಹೇಗಿದೆ ಎಂದು ತಿಳಿದುಕೊಳ್ಳಲು. ಕೆಲ ಶಾಸಕರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರು ಅವರ ಅಭಿಪ್ರಾಯ ಹೇಳ್ತಿದ್ದಾರೆ. ಬ್ಲಾಕ್ ಕಾಂಗ್ರೆಸ್, ಯೂತ್ ಕಾಂಗ್ರೆಸ್ ಹಾಗೇ, ಸೇವಾದಳ, ಮಹಿಳಾ ಕಾಂಗ್ರೆಸ್, ಕಿಸಾನ್ ಕಾಂಗ್ರೆಸ್, ಇವೆಲ್ಲವೂ ಹೇಗೆ ಕಾರ್ಯನಿರ್ವಹಿಸುತ್ತಿವೆ? ಹಾಗೇ ಪ್ರತಿ ಕ್ರೇತ್ರದಲ್ಲಿ ಗ್ಯಾರಂಟಿ ಸ್ಕೀಂ ಹೇಗಿವೆ? ಜನರು ಹೇಗೆ ಸ್ವೀಕಾರ ಮಾಡಿದ್ದಾರೆ? ಮುಂದೆ ಹೇಗೆ ಜಾರಿ ಮಾಡಬಹುದು. ಇದರ ಬಗ್ಗೆ ಶಾಸಕರ ಬಳಿ ಮಾತನಾಡಿದ್ದೇನೆ. ಶಾಸಕರು ಅವರ ಅಭಿಪ್ರಾಯ ಕೊಟ್ಟಿದ್ದಾರೆ ಎಂದರು.

ಶಾಸಕರ ಅಸಮಾಧಾನ ವಿಚಾರವಾಗಿ ಮಾತನಾಡಿ, ಯಾರೇ ಇರಲಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು. ಅದಕ್ಕೆಂದೇ ವೇದಿಕೆಯಿದೆ. ಬೇರೆಲ್ಲೋ ಮಾತನಾಡೋಕೆ ಅವಕಾಶವಿಲ್ಲ. ಶಾಸಕರು ಅವರ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯೆಗೆ ನಿರಾಕರಿಸಿದ ಅವರು, ಪಕ್ಷ ಸಂಘಟನೆ ಬಗ್ಗೆಯಷ್ಟೇ ನಾವು ಗಮನ ಕೊಟ್ಟಿದ್ದೇವೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande