ಸಂಚಾರಿ ಜಾಗೃತಿ ವಾಹನಕ್ಕೆ ಎಸ್‍ಪಿ ಡಾ.ಶೋಭಾರಾಣಿ ವಿ.ಜೆ ಚಾಲನೆ
ಬಳ್ಳಾರಿ, 01 ಜುಲೈ (ಹಿ.ಸ.) : ಆ್ಯಂಕರ್ : ಮಿನೆರಾ ಸ್ಟೀಲ್ ಅಂಡ್ ಪವರ್ ಪ್ರೈವೇಟ್ ಲಿಮಿಟೆಡ್‍ನ ಸಿಎಸ್‍ಆರ್ ಯೋಜನೆಯಡಿ ಅಪರಾಧಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಂಚಾರಿ ಜಾಗೃತಿ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಜಿಲ್ಲಾ ಪೊಲೀಸ್ ಕಚೇರಿ ಆವರ
ಸಂಚಾರಿ ಜಾಗೃತಿ ವಾಹನಕ್ಕೆ ಎಸ್‍ಪಿ ಡಾ.ಶೋಭಾರಾಣಿ.ವಿ.ಜೆ ಚಾಲನೆ


ಸಂಚಾರಿ ಜಾಗೃತಿ ವಾಹನಕ್ಕೆ ಎಸ್‍ಪಿ ಡಾ.ಶೋಭಾರಾಣಿ.ವಿ.ಜೆ ಚಾಲನೆ


ಬಳ್ಳಾರಿ, 01 ಜುಲೈ (ಹಿ.ಸ.) :

ಆ್ಯಂಕರ್ : ಮಿನೆರಾ ಸ್ಟೀಲ್ ಅಂಡ್ ಪವರ್ ಪ್ರೈವೇಟ್ ಲಿಮಿಟೆಡ್‍ನ ಸಿಎಸ್‍ಆರ್ ಯೋಜನೆಯಡಿ ಅಪರಾಧಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಂಚಾರಿ ಜಾಗೃತಿ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಚಾಲನೆ ನೀಡಿದ್ದಾರೆ.

ನಂತರ ಮಾತನಾಡಿದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು, ಅಪರಾಧಗಳ ನಿಯಂತ್ರಣ ಮತ್ತು ಮಹಿಳಾ ಹಾಗೂ ಮಕ್ಕಳ, ಹಿರಿಯ ನಾಗರಿಕರ ಸುರಕ್ಷತೆ, ರಸ್ತೆ ಸುರಕ್ಷತೆ, ಸ್ವತ್ತಿನ ಅಪರಾಧಗಳ ನಿಯಂತ್ರಣ, ಮಾದಕ ದ್ರವ್ಯ ಸೇವನೆ ದುಷ್ಪರಿಣಾಮ, ಸೈಬರ್ ವಂಚನೆ, ಜಾತಿ ನಿಂದನೆ ಸೇರಿದಂತೆ ಮುಂತಾದ ಅಪರಾಧಗಳ ಬಗ್ಗೆ ಸಾರ್ವಜನಿಕರಲ್ಲಿ ಸುರಕ್ಷತಾ ಕ್ರಮಗಳ ಕುರಿತು ಸಂಚಾರಿ ಜಾಗೃತಿ ವಾಹನವು ಜಾಗೃತಿ ಮೂಡಿಸಲಿದೆ ಎಂದರು.

ವಾಹನ ಸವಾರರ ಸುರಕ್ಷತೆಗಾಗಿ ಪೊಲೀಸ್ ಸಿಬ್ಬಂದಿಯವರಿಗೆ ಉಚಿತ ಹೆಲ್ಮೆಟ್ ವಿತರಿಸಲಾಯಿತು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರವಿಕುಮಾರ್, ನವೀನ್ ಕುಮಾರ್, ಮಿನೆರಾ ಸ್ಟೀಲ್ಸ್ ಅಂಡ್ ಪವರ್ ಪ್ರೈವೇಟ್ ಲಿಮಿಟೆಡ್‍ನ ವ್ಯವಸ್ಥಾಪಕ ಟಿ. ಹನುಮಂತರೆಡ್ಡಿ ಸೇರಿದಂತೆ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande