ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಬೇಕು : ಬಿ. ಎಸ್. ಹಿರೇಮಠ
ಗದಗ, 01 ಜುಲೈ (ಹಿ.ಸ.) : ಆ್ಯಂಕರ್ : ಗದಗ ನಗರದ ಮನೋರಮಾ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಹಾಗೂ ಪಾರಿತೋಷಕ ವಿತರಣೆ ಕಾರ್ಯಕ್ರಮ ಜರುಗಿತು. ಪ್ರೊ. ಬಡೆಖಾನವರು ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧಾ ಭಕ್ತಿಯಿಂದ ಅಧ್ಯಯನಶೀಲರಾದರೆ ಉತ್ತಮ ಫಲಿತಾಂಶ ಹೊಂದುವಿರಿ. ವ
ಪೋಟೋ


ಗದಗ, 01 ಜುಲೈ (ಹಿ.ಸ.) :

ಆ್ಯಂಕರ್ : ಗದಗ ನಗರದ ಮನೋರಮಾ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಹಾಗೂ ಪಾರಿತೋಷಕ ವಿತರಣೆ ಕಾರ್ಯಕ್ರಮ ಜರುಗಿತು.

ಪ್ರೊ. ಬಡೆಖಾನವರು ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧಾ ಭಕ್ತಿಯಿಂದ ಅಧ್ಯಯನಶೀಲರಾದರೆ ಉತ್ತಮ ಫಲಿತಾಂಶ ಹೊಂದುವಿರಿ. ವಿದ್ಯೆಯ ಜೊತೆಗೆ ಆತ್ಮವಿಶ್ವಾಸ ಹಾಗೂ ಅಂತರಾತ್ಮದ ಅರಿವಿನ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.

ಪ್ರಾಚಾರ್ಯ ಬಿ.ಎಸ್. ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳು ಹೆತ್ತ ತಂದೆ-ತಾಯಿ, ಕಲಿತ ಶಾಲೆ, ಮತ್ತು ಋಣ ಕಲಿಸಿದ ಗುರು ಹೊತ್ತ ಭೂಮಿಯ ತೀರಿಸಬೇಕಾದರೆ ಸಮಾಜ ಮೆಚ್ಚುವ ರೀತಿಯಲ್ಲಿ ಉತ್ತಮ ಪ್ರಜೆಗಳಾಗಬೇಕು. ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು. ಓದುವ ಸಮಯದಲ್ಲಿ ಕಾಲಹರಣ ಮಾಡಿದರೆ ಕಷ್ಟ ಕಟ್ಟಿಟ್ಟ ಬುತ್ತಿ ಎಂಬುದನ್ನು ಮರೆಯಬಾರದು ಎಂದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್. ಎಮ್. ಕುಡತರಕರ ವಹಿಸಿದ್ದರು. ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಸಂಸ್ಥೆಯ ಖಜಾಂಚಿ ಸಂಜಯ ಕುಡತರಕರ, ನಿರ್ದೇಶಕ ಚೇತನ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಯೋಜಕರುಗಳಾದ ಅಲ್ಲೀನಾ ಡಿ, ಪ್ರೊ. ಸವೀತಾ ಪೂಜಾರ, ಪ್ರೊ. ಚೈತ್ರಾ ಡಿ. ಪ್ರೊ. ಶಾಹೀದಾ ಶಿರಹಟ್ಟಿ ಸೇರಿದಂತೆ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande