ರಾಜ್ಯದಲ್ಲಿ ಹುಲಿಗಳ ಸಾವು ಪ್ರಕರಣ : ವರದಿ ಸಲ್ಲಿಸಲು ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು, 01 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 82 ಹುಲಿಗಳು ಮೃತಪಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಆಘಾತ ವ್ಯಕ್ತಪಡಿಸಿದ್ದು, ಈ ಎಲ್ಲ ಹುಲಿಗಳ ಸಾವಿನ ಬಗ್ಗೆ ವರದಿ ಸಲ್ಲಿಸುವಂತೆ ಅರ
ರಾಜ್ಯದಲ್ಲಿ ಹುಲಿಗಳ ಸಾವು ಪ್ರಕರಣ : ವರದಿ ಸಲ್ಲಿಸಲು ಈಶ್ವರ ಖಂಡ್ರೆ ಸೂಚನೆ


ಬೆಂಗಳೂರು, 01 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 82 ಹುಲಿಗಳು ಮೃತಪಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಆಘಾತ ವ್ಯಕ್ತಪಡಿಸಿದ್ದು, ಈ ಎಲ್ಲ ಹುಲಿಗಳ ಸಾವಿನ ಬಗ್ಗೆ ವರದಿ ಸಲ್ಲಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಸಚಿವರು, ಸಾವನ್ನಪ್ಪಿರುವ 82 ಹುಲಿಗಳ ಪೈಕಿ ಎಷ್ಟು ಹುಲಿಗಳು ಸಹಜವಾಗಿ ಸಾವನ್ನಪ್ಪಿವೆ?. ಎಷ್ಟು ಹುಲಿಗಳು ಅಸಹಜವಾಗಿ ಮೃತಪಟ್ಟಿವೆ?. ಅಸಹಜವಾಗಿ ಮೃತಪಟ್ಟ ಹುಲಿಗಳ ಸಾವಿಗೆ ಕಾರಣವೇನು? ಎಂಬ ಬಗ್ಗೆ ತನಿಖೆ ನಡೆದು ವರದಿ ಬಂದಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಮೃತಪಟ್ಟ ಯಾವುದಾದರೂ ಹುಲಿಗಳ ಅಂಗಾಂಗ ಅಂದರೆ ಉಗುರು, ಹಲ್ಲು ಇತ್ಯಾದಿ ತೆಗೆಯಲಾಗಿತ್ತೆ?. ಹುಲಿಗಳ ಹತ್ಯೆ ಆಗಿದ್ದಲ್ಲಿ ನಿರ್ಲಕ್ಷ್ಯ ತೋರಿದ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಕ್ರಮ ಆಗಿದೆಯೇ? ಎಷ್ಟು ಹುಲಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ? ಎಂಬ ವಿವರವನ್ನೂ ಸಚಿವರು ಕೇಳಿದ್ದಾರೆ.

ಈವರೆಗೆ ಹುಲಿ ಹತ್ಯೆ ಪ್ರಕರಣಗಳಲ್ಲಿ ಎಷ್ಟು ಜನರಿಗೆ ಶಿಕ್ಷೆ ಆಗಿದೆ? ಎಷ್ಟು ಪ್ರಕರಣಗಳು ತನಿಖಾ ಹಂತದಲ್ಲಿವೆ?. ಯಾವ ಕಾರಣಕ್ಕೆ ತನಿಖೆ ವಿಳಂಬವಾಗಿದೆ ಎಂಬ ಸಂಪೂರ್ಣ ವಿವರವನ್ನು 10 ದಿನಗಳ ಒಳಗಾಗಿ ತಮಗೆ ಸಲ್ಲಿಸಲು ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande