ಮುಂಬೈನ ಪರ ಮುಂದುವರಿಯಲು ಯಶಸ್ವಿ ಜೈಸ್ವಾಲ್ ನಿರ್ಧಾರ
ಮುಂಬಯಿ, 1 ಜುಲೈ (ಹಿ.ಸ.) : ಆ್ಯಂಕರ್ : ಭಾರತದ ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಮುಂಬರುವ 2025-26 ದೇಶೀಯ ಋತುವಿನಲ್ಲಿ ಮುಂಬೈ ತಂಡದ ಪರ ಮುಂದುವರಿಯಲಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಶನ್ ಅವರ ಗೋವಾಕ್ಕೆ ಸ್ಥಳಾಂತರದ ನಿರಾಕ್ಷೇಪಣಾ ಪ್ರಮಾಣಪತ್ರ ಹಿಂಪಡೆಯಲು ಸಲ್ಲಿಸಿದ್ದ ಅರ್ಜಿಯನ್ನು ಸ್ವೀ
Jaiswal


ಮುಂಬಯಿ, 1 ಜುಲೈ (ಹಿ.ಸ.) :

ಆ್ಯಂಕರ್ : ಭಾರತದ ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಮುಂಬರುವ 2025-26 ದೇಶೀಯ ಋತುವಿನಲ್ಲಿ ಮುಂಬೈ ತಂಡದ ಪರ ಮುಂದುವರಿಯಲಿದ್ದಾರೆ.

ಮುಂಬೈ ಕ್ರಿಕೆಟ್ ಅಸೋಸಿಯೇಶನ್ ಅವರ ಗೋವಾಕ್ಕೆ ಸ್ಥಳಾಂತರದ ನಿರಾಕ್ಷೇಪಣಾ ಪ್ರಮಾಣಪತ್ರ ಹಿಂಪಡೆಯಲು ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿದೆ.

ಎಂಸಿಎ ಅಧ್ಯಕ್ಷ ಅಜಿಂಕ್ಯ ನಾಯಕ್ ಈ ಕುರಿತು ಹೇಳಿಕೆ ನೀಡಿದ್ದು, ಜೈಸ್ವಾಲ್ ಮುಂಬೈ ಕ್ರಿಕೆಟ್‌ನ ಹೆಮ್ಮೆಯ ಆಟಗಾರ. ಅವರು ಮತ್ತೆ ಮುಂಬೈ ಪರ ಆಡಲು ಬಯಸಿದ್ದು ಸಂತೋಷದ ವಿಷಯ ಎಂದು ತಿಳಿಸಿದ್ದಾರೆ.

ಜೈಸ್ವಾಲ್ ಈ ಹಿಂದೆ ಗೋವಾ ಪರ ಆಡುವ ಉದ್ದೇಶದಿಂದ ಎನ್ಒಸಿ ಕೋರಿದ್ದರು. ಆದರೆ ಬಳಿಕ ತಮ್ಮ ಯೋಜನೆ ಬದಲಾಯಿಸಿ ಮುಂಬೈ ಪರವೇ ಮುಂದುವರಿಯಲು ನಿರ್ಧರಿಸಿದ್ದಾರೆ.

2019ರಲ್ಲಿ ಮುಂಬೈ ಪರ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಜೈಸ್ವಾಲ್, 10 ಪಂದ್ಯಗಳಲ್ಲಿ 53.93 ಸರಾಸರಿಯಲ್ಲಿ 863 ರನ್ ಗಳಿಸಿದ್ದಾರೆ. ಪ್ರಸ್ತುತ ಅವರು ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಭಾರತೀಯ ತಂಡದಲ್ಲಿ ಆಡುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande