ಕೋಲಾರ, ಜುಲೈ ೧ (ಹಿ.ಸ) :
ಆ್ಯಂಕರ್ : ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಆರಂಭಗೊಳ್ಳಲಿದ್ದು, ಈ ಸಂದರ್ಭದಲ್ಲಿ ನಡೆಯಲಿರುವ ಹೆಚ್ಚುವರಿ ಕೌನ್ಸಿಲಿಂಗ್‌ನಲ್ಲಿ ನಿವೃತ್ತಿ ಅಂಚಿನಲ್ಲಿರುವ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಕೈಬಿಡುವಂತೆ ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ ಶ್ರೀನಿವಾಸ್ ಸರ್ಕಾರಕ್ಕೆ ಮನವಿ ಮಾಡಿದರು.
ಕೋಲಾರ ನಗರದ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನ ಮಾಡುತ್ತಿದ್ದು, ಶಾಲೆಗಳ ಸರ್ವಾಂಗೀಣ ಪ್ರಗತಿಗೆ ಶ್ರಮಿಸುತ್ತಿರುವ ಮುಖ್ಯೋಪಾಧ್ಯಾಯರು ನಿವೃತ್ತಿ ಹಂಚಿನಲ್ಲಿ ವರ್ಗಾವಣೆ, ಹೆಚ್ಚುವರಿಯಿಂದ ತತ್ತರಿಸಿ ಹೋಗಿದ್ದಾರೆ ಎಂದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ದುಡಿಯುತ್ತಿರುವ ಶಿಕ್ಷಕರು ಪ್ರತಿದಿನ ಮೊಟ್ಟೆ ವಿತರಣೆ, ಕ್ಷೀರ ಭಾಗ್ಯ, ಸ್ಯಾಟ್ಸ್ ವಿವರಗಳನ್ನು ಆನ್‌ಲೈನ್ ಮೂಲಕ ಸಲ್ಲಿಸುವ ಕಾರ್ಯಗಳೇ ಅಲ್ಲದೆ ಇಲಾಖೆಯ ಕೆಲಸವನ್ನು ಪ್ರಮಾಣಿಕವಾಗಿ ಮಾಡುತ್ತಿದ್ದು, ಪಾಠ ಪ್ರವಚನಗಳ ಬೋಧನೆಗೆ ಹೆಚ್ಚಿನ ಸಮಯ ಸಿಗುವಂತೆ ಅವಕಾಶ ಕಲ್ಪಿಸಬೇಕು ಎಂದರು ಎಂದರು .
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ನಾರಾಯಣಸ್ವಾಮಿ ಮಾತನಾಡಿ, ಇಲಾಖೆಯು ಅನುದಾನಗಳನ್ನು ಕಾಲಕಾಲಕ್ಕೆ ಬಿಡುಗಡೆಗೊಳಿಸಬೇಕು ಮುಖ್ಯೋಪಾಧ್ಯಾಯರಿಗೆ ಪಠ್ಯೇತರ ಚಟುವಟಿಕೆಯ ಹೊರೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಪ್ರಥಮ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಖಜಾಂಚಿ ಕೆ.ವಿ.ಜಗನ್ನಾಥ್, ಮುಖಂಡರುಗಳಾದ ಸಿ ವಿ ನಾಗರಾಜ್, ಕೋಟೇಶ್ವರರಾವ್, ಮಳಬಾಗಿಲಿನ ವಾಲಿಬಾಲ್ ಶಿವಣ್ಣ, ಬಿ ಎಂ ಶಂಕರಪ್ಪ, ಶಿವರಾಜ್ ವೆಂಕಟೇಶಮೂರ್ತಿ, ಎಲ್.ಶ್ರೀನಿವಾಸ್, ಬಂಗಾರಪೇಟೆ ಪ್ರೇಮಲತಾ, ಆಂಜಿನಪ್ಪ, ರಾಮಚಂದ್ರಪ್ಪ ವೆಂಕಟೇಶ್, ಗೋವಿಂದಪ್ಪ, ರಾಮಕೃಷ್ಣ,ಮುರುಳಿಧರ್, ಜಯಮ್ಮ,ಪದ್ಮಾವತಿ, ಹೇಮಲತ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ : ನಿವೃತ್ತಿಯ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡದಂತೆ ಒತ್ತಾಯಿಸಿ ಸರ್ಕಾರಕ್ಕೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಮೂಲಕ ಸರ್ಕಾರಕ್ಕೆ ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದಿAದ ಮನವಿ ಸಲ್ಲಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್