ರಾಂಚಿ, 10 ಜುಲೈ (ಹಿ.ಸ.) :
ಆ್ಯಂಕರ್ : ಪೂರ್ವ ವಲಯ ಮಂಡಳಿಯ 27ನೇ ಸಭೆ ಇಂದು ಜಾರ್ಖಂಡ್ ನ ರಾಂಚಿಯ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಆರಂಬವಾಗಿದೆ. ಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆ ವಹಿಸಿದ್ದು, ಜಾರ್ಖಂಡ್, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಪ್ರಮುಖ ನಾಯಕರು ಪಾಲ್ಗೊಂಡಿದ್ದಾರೆ.
ಸಭೆಯ ಆರಂಭದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಅಮಿತ್ ಶಾ ಅವರಿಗೆ ಹೂಗುಚ್ಛ ಹಾಗೂ ಸ್ಮರಣಿಕೆ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಸಭೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಮತ್ತು ಸಚಿವ ವಿಜಯ್ ಚೌಧರಿ, ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ, ಉಪಮುಖ್ಯಮಂತ್ರಿ ಪಾರ್ವತಿ ಪರಿದಾ, ಸಚಿವ ಮುಖೇಶ್ ಮಹಾಲಿಂಗ್, ಪಶ್ಚಿಮ ಬಂಗಾಳದ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಭಾಗವಹಿಸಲಿದ್ದಾರೆ.
ಈ ಮಹತ್ವದ ಸಭೆಯಲ್ಲಿ ಒಟ್ಟು 20 ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಯಲಿದೆ. ರಾಜ್ಯಗಳ ಪರಸ್ಪರ ಸಹಕಾರ, ಅಭಿವೃದ್ಧಿ ಯೋಜನೆಗಳು ಮತ್ತು ಭದ್ರತೆ ಸಂಬಂಧಿತ ವಿಚಾರಗಳು ಈ ಸಭೆಯಲ್ಲಿ ಮುಖ್ಯ ಅಂಶಗಳಾಗಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa