ವಿಜಯಪುರ, 10 ಜುಲೈ (ಹಿ.ಸ.) :
ಆ್ಯಂಕರ್ : ವಿಜಯಪುರ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಕಾನೂನು ಪದವೀಧರರು sw.kar.nic.in ನಲ್ಲಿ ವರ್ಷದ ಎಲ್ಲಾ ದಿನಗಳಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‌ಲೈನ್ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ನಮೂನೆ,ಅಗತ್ಯ ದಾಖಲೆ ಸಹಿತ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande