ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ರಾಯಚೂರು, 10 ಜುಲೈ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಪರಿಶಿಷ್ಟ ಜಾತಿಯ ಕಾನೂನು ಪದವೀಧರರನ್ನು ವೃತ್ತಿ ತರಬೇತಿಗೆ ಮಾಸಿಕ ಶಿಷ್ಯ ವೇತನಕ್ಕೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಪದವೀಧರರಿಗೆ ಮಾಸಿಕ ಶಿಷ್ಯ ವೇತನಕ್ಕ
ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ


ರಾಯಚೂರು, 10 ಜುಲೈ (ಹಿ.ಸ.) :

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಪರಿಶಿಷ್ಟ ಜಾತಿಯ ಕಾನೂನು ಪದವೀಧರರನ್ನು ವೃತ್ತಿ ತರಬೇತಿಗೆ ಮಾಸಿಕ ಶಿಷ್ಯ ವೇತನಕ್ಕೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾನೂನು ಪದವೀಧರರಿಗೆ ಮಾಸಿಕ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ವರ್ಷದ ಎಲ್ಲಾ ದಿನಗಳು (365 ದಿನಗಳು) ಅವಕಾಶ ಕಲ್ಪಿಸಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜುಲೈ 01ರಿಂದಲೇ ವರ್ಷದ ಎಲ್ಲಾ ದಿನಗಳು (365) ಆನ್‍ಲೈನ್ ಮೂಲಕ ಇಲಾಖೆಯ ವೆಬ್‍ಸೈಟ್ ವಿಳಾಸ:: www.sw.kar.nic.in ನಲ್ಲಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande