ಮುರುಡೇಶ್ವರ, 10 ಜುಲೈ (ಹಿ.ಸ.) :
ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಸಮೀಪದ ಸಮುದ್ರದಲ್ಲಿ ಸಂಭವಿಸಿದ ದೋಣಿ ಅಪಘಾತದಲ್ಲಿ ಓರ್ವ ಮೀನುಗಾರ ಮೃತಪಟ್ಟಿದ್ದು, ಓರ್ವ ನಾಪತ್ತೆಯಾಗಿದ್ದು. ಮತ್ತೋರ್ವ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಜನಾರ್ಧನ ಹರಿಕಾಂತ್ ಎಂಬುವವರಿಗೆ ಸೇರಿದ ದೋಣಿ ಸಮುದ್ರದಲ್ಲಿ ಮಗುಚಿ ಬಿದ್ದಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾಧವ ಹರಿಕಾಂತ (45) ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ದೋಣಿಯಲ್ಲಿದ್ದ ವೆಂಕಟೇಶ್ ಅಣ್ಣಪ್ಪ ಹರಿಕಾಂತ್ (26) ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮತ್ತೋರ್ವ ಮೀನುಗಾರ ಆನಂದ ಅಣ್ಣಪ್ಪ ಹರಿಕಾಂತ ಅವರನ್ನು ರಕ್ಷಿಸಲಾಗಿದೆ.
ಈ ಕುರಿತು ಮುರ್ಡೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa