ಕೆಪಿಎಂಇ ಕಾಯ್ದೆ ಸಮಗ್ರವಾಗಿ ,ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ
ರಾಯಚೂರು, 10 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ (ಕೆಪಿಎಂಇ) ಕಾಯಿದೆ ಈಗಾಗಲೇ ಜಾರಿಗೆ ಬಂದಿದ್ದು, ಅದನ್ನು ಜಿಲ್ಲೆಯಲ್ಲಿ ಸಮಗ್ರವಾಗಿ ,ಅನುಷ್ಠಾನಕ್ಕೆ ತರಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದ್ದಾರೆ. ಗುರ
ಕೆಪಿಎಂಇ ಕಾಯ್ದೆ ಸಮಗ್ರವಾಗಿ ,ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ


ರಾಯಚೂರು, 10 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ (ಕೆಪಿಎಂಇ) ಕಾಯಿದೆ ಈಗಾಗಲೇ ಜಾರಿಗೆ ಬಂದಿದ್ದು, ಅದನ್ನು ಜಿಲ್ಲೆಯಲ್ಲಿ ಸಮಗ್ರವಾಗಿ ,ಅನುಷ್ಠಾನಕ್ಕೆ ತರಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದ್ದಾರೆ.

ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೆಪಿಎಂಇ ನೋಂದಣಿ ಮತ್ತು ಕುಂದು ಕೊರತೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೆಪಿಎಂಇ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿಯಾಗಬೇಕು. ವೈದ್ಯಕೀಯ ವೃತ್ತಿ ನಡೆಸಲು ಅಗತ್ಯ ವಿದ್ಯಾರ್ಹತೆ ಇಲ್ಲದ ನಕಲಿ ವೈದ್ಯರು, ನರ್ಸಿ ಹಾಗೂ ನಡೆಸುವರು ವಿರುದ್ಧ ಕಾನೂನಿನ ಅಡಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕಾಲ ಕಾಲಕ್ಕೆ ಕೆಪಿಎಂಇ ಸಭೆ ಸೇರಬೇಕು. ಸಂಬಂಧಿಸಿದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಖಾಸಗಿ ಆಸ್ಪತ್ರೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಬೇಕು. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸ ದರ ಪಟ್ಟಿಯನ್ನು ಕಡ್ಡಾಯವಾಗಿ ಹಾಕುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಒಂದು ವೇಳೆ ದರಪಟ್ಟಿ ಹಾಕದೆ ಇರುವ ಆಸ್ಪತ್ರೆಗಳ ಮೇಲೆ ದಾಳಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕೆಪಿಎಂಇ ಕಾಯ್ದೆ ಕುರಿತು ಜಿಲ್ಲೆಯ ಸಂಬಂಧಿಸಿದ ಅಧಿಕಾರಿಗಳಿಗೆ ಶೀಘ್ರದಲ್ಲೇ ತರಬೇತಿಯನ್ನು ಆಯೋಜಿಸಬೇಕು. ಜಿಲ್ಲೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು ಕಾಯ್ದೆಯನ್ನು ಸರಿಯಾಗಿ ಅನುಷ್ಠಾನ ಮಾಡಬೇಕು ಅಧಿಕಾರಿಗಳು ನಿರ್ಲಕ್ಷ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೆಪಿಎಂಇ ಕಾಯ್ದೆಯಡಿ ನೋಂದಣಿಯಾದ ಪ್ರಮಾಣ ಪತ್ರ ಹಾಗೂ ಮರುನೋಂದಣೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪ್ರದರ್ಶನ ಮಾಡಬೇಕು. ಅಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯರಿಂದ ಮಾತ್ರ ರೋಗಿಗಳ ವಿಚಾರಣೆ ಮಾಡಬೇಕು.

ಜಿಲ್ಲೆಯಲ್ಲಿ ಮರುನೋಂದಣೆಗೆ ರಾಯಚೂರಿನಲ್ಲಿ 04, ಮಾನ್ವಿಯಲ್ಲಿ 9 ಸೇರಿದಂತೆ ಒಟ್ಟು 13 ಖಾಸಗಿ ಆಸ್ಪತ್ರೆಗಳು ಕಾಯ್ದೆಯಡಿ ಮರುನೋಂದಣಿಗೆ ಮಾಡಿರುವುದಿಲ್ಲ. ಕಾಯ್ದೆಯ ರಾಯಚೂರಿನಲ್ಲಿ 10, ಮಾನ್ವಿಯಲ್ಲಿ 2 ಹಾಗೂ ಲಿಂಗಸುಗೂರಿನಲ್ಲಿ 01 ಸೇರಿದಂತೆ ಒಟ್ಟು 13 ಹೊಸ ಅರ್ಜಿಗಳ ಬಂದಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಸಭೆಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಐ.ಎಮ್.ಎ ಸಂಸ್ಥೆಯ ಅಧ್ಯಕ್ಷರಾದ ಡಾ.ಶ್ರೀಶೈಲ ಅಮರಖೇಡ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರವೀಂದ್ರ ಘಟಗಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವುಕುಮಾರ್, ರಾಯಚೂರು ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಇಲಾಖೆಯ ಅಧಿಕಾರಿ, ಸಿಬ್ಬಂದಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande