ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಸೇರಿದಂತೆ 5 ಕಡೆಗಳಲ್ಲಿ ಇಡಿ ದಾಳಿ
ಬೆಂಗಳೂರು, 10 ಜುಲೈ (ಹಿ.ಸ.) : ಆ್ಯಂಕರ್ : ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ ಉಲ್ಲಂಘನೆಯ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಬಿ. ಸುಬ್ಬಾರೆಡ್ಡಿ ಅವರ ಮನೆ ಸೇರಿದಂತೆ ಬೆಂಗಳೂರಿನಲ್ಲಿ ಐದು ಸ್ಥಳಗಳಲ್ಲಿ ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್
Subbareddy


ಬೆಂಗಳೂರು, 10 ಜುಲೈ (ಹಿ.ಸ.) :

ಆ್ಯಂಕರ್ : ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ ಉಲ್ಲಂಘನೆಯ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಬಿ. ಸುಬ್ಬಾರೆಡ್ಡಿ ಅವರ ಮನೆ ಸೇರಿದಂತೆ ಬೆಂಗಳೂರಿನಲ್ಲಿ ಐದು ಸ್ಥಳಗಳಲ್ಲಿ ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸುಬ್ಬಾರೆಡ್ಡಿ ಅವರ ನಿವಾಸ ಮತ್ತು ಕುಟುಂಬದವರ ಆಸ್ತಿ ಹಾಗೂ ಉದ್ಯಮ ಪಾಲುದಾರರ ಆಸ್ತಿ ಮೇಲೆ ಶೋಧ ನಡೆಸಲಾಗಿದೆ. ಮಲೇಷ್ಯಾ, ಹಾಂಕಾಂಗ್ ಮತ್ತು ಜರ್ಮನಿಯಲ್ಲಿರುವ ಬ್ಯಾಂಕ್ ಖಾತೆಗಳು, ವಿದೇಶೀ ಆಸ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ವಿದೇಶ ವ್ಯವಹಾರ ಮತ್ತು ಹೂಡಿಕೆ ಕುರಿತು ಮಹತ್ವದ ದಾಖಲೆಗಳು ಲಭ್ಯವಾಗಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಇಡಿ ತಂಡ ಈ ದಾಳಿಯನ್ನು ನಡೆಸಿರುವುದಾಗಿ ಮೂಲಗಳು ತಿಳಿಸಿವೆ. ಶಾಸಕರ ಸಂಬಂಧಿಕರ ವಿರುದ್ಧವೂ ತನಿಖೆ ಮುಂದುವರಿದಿದೆ.

ಇನ್ನೂ ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande