ನವದೆಹಲಿ, 10 ಜುಲೈ (ಹಿ.ಸ.) :
ಆ್ಯಂಕರ್ : ಇಂದು ಬೆಳಿಗ್ಗೆ 9:04ರ ವೇಳೆಗೆ ಹರಿಯಾಣದ ಝಜ್ಜರ್ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದ್ದು, ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4 ಎಂದು ದಾಖಲಾಗಿದೆ. ಭೂಕಂಪದ ಕೇಂದ್ರಬಿಂದುವು ಭೂಮಿಯಿಂದ 10 ಕಿ.ಮೀ ಆಳದಲ್ಲಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಭೂಕಂಪದ ಕಂಪನ ದೆಹಲಿ, ನೋಯ್ಡಾ, ಗುರುಗ್ರಾಮ್, ಫರಿದಾಬಾದ್ ಹಾಗೂ ಇತರ ಎನ್‌ಸಿಆರ್ ಪ್ರದೇಶಗಳಲ್ಲಿ ಸ್ಪಷ್ಟವಾಗಿ ಅನುಭವಿಸಲಾಯಿತು. ತೀವ್ರ ಕಂಪನದಿಂದ ಕೆಲವಡೆ ಜನ ಭೀತಿಯಲ್ಲಿ ಮನೆಗಳಿಂದ ಹೊರಗಡೆ ಬಂದಿದ್ದಾರೆ.
ಕಂಪನದಿಂದ ಯಾವುದೇ ಜೀವಹಾನಿ,ಆಸ್ತಿ ಹಾನಿ ಸಂಭವಿಸಿಲ್ಲ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa