ವಿಜಯಪುರ, 10 ಜುಲೈ (ಹಿ.ಸ.) :
ಆ್ಯಂಕರ್ : 2024-25ನೇ ಸಾಲಿನಲ್ಲಿ ರಾಜೀವ ಗಾಂಧಿ ವಿಶ್ವವಿದ್ಯಾಲಯದಲ್ಲಿ ಮೆಟ್ರಿಕ್ ನಂತರದ ಕೋರ್ಸನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಧಿ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ವೆಬ್ಸೈಟ್ https://ssp.postmatric.karnataka.gov.in ನಲ್ಲಿ ಶುಲ್ಕ ಮರುಪಾವತಿಗೆ ಅರ್ಜಿಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770005ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande