ನವದೆಹಲಿ, 10 ಜುಲೈ (ಹಿ.ಸ.) :
ಆ್ಯಂಕರ್ : ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ತೆರೆ ಬಿದ್ದಿದೆ ಐದು ವರ್ಷವೂ ನಾನು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲೇ ಇರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕುರಿತು ಜುಲೈ 2ರಲ್ಲೇ ಸ್ಪಷ್ಟನೆ ನೀಡಿದ್ದು, ಆ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹ ಉಪಸ್ಥಿತರಿದ್ದರೆಂದು ಹೇಳಿದರು.
ನಮ್ಮದು ಹೈಕಮಾಂಡ್ ಆಧಾರಿತ ಪಕ್ಷ. 2023ರ ಸಭೆಯಲ್ಲಿ ಎರಡುವರೆ ವರ್ಷಗಳ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ನಿರ್ಧಾರವೂ ಆಗಿಲ್ಲ. ನಾವು ಹೈಕಮಾಂಡ್ ಹೇಳುವುದನ್ನು ಅನುಸರಿಸುತ್ತೇವೆ. ನಾನು ಸಹ ಅನುಸರಿಸುತ್ತೇನೆ, ಡಿ.ಕೆ. ಶಿವಕುಮಾರ್ ಕೂಡ ಅನುಸರಿಸುತ್ತಾರೆ ಎಂದು ಹೇಳಿದರು.
ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಆಕಾಂಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಮುಖ್ಯಮಂತ್ರಿ ಆಗಬೇಕೆಂಬ ಆಸೆ ಹೊಂದಿರುವುದು ತಪ್ಪು ಅಲ್ಲ. ಆದರೆ ಅವರು ಸ್ವತಃ 'ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ' ಎಂದಿದ್ದಾರೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa