ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಇತಿಶ್ರೀ : ಜಾರಕಿಹೊಳಿ‌
ಬೆಂಗಳೂರು, 10 ಜುಲೈ (ಹಿ.ಸ.) : ಆ್ಯಂಕರ್ : ಸಿದ್ದರಾಮಯ್ಯ ಕೊಟ್ಟ ಸಂದೇಶ ಮ್ಯಾಚ್ ಕ್ಲೋಸ್ ಎಂದು. ಹಾಗಾಗಿ ಇಂದಿನಿಂದ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಕ್ಲೋಸ್ ಆಗಬೇಕು. 10% ಜನ ಯಾರು ಮಾತಾಡುತ್ತಿದ್ದರೋ ಅವರಿಗೂ ಸ್ಪಷ್ಟ ಸಂದೇಶ ​ ಇದು ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾ
ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಇತಿಶ್ರೀ : ಜಾರಕಿಹೊಳಿ‌


ಬೆಂಗಳೂರು, 10 ಜುಲೈ (ಹಿ.ಸ.) :

ಆ್ಯಂಕರ್ : ಸಿದ್ದರಾಮಯ್ಯ ಕೊಟ್ಟ ಸಂದೇಶ ಮ್ಯಾಚ್ ಕ್ಲೋಸ್ ಎಂದು. ಹಾಗಾಗಿ ಇಂದಿನಿಂದ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಕ್ಲೋಸ್ ಆಗಬೇಕು. 10% ಜನ ಯಾರು ಮಾತಾಡುತ್ತಿದ್ದರೋ ಅವರಿಗೂ ಸ್ಪಷ್ಟ ಸಂದೇಶ ​ ಇದು ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಮುಖ್ಯಮಂತ್ರಿ ಹೇಳಿದ ಮೇಲೆ ಎಲ್ಲದಕ್ಕೂ ಇತಿಶ್ರೀ ಇದ್ದಂತೆ. ನಾಯಕತ್ವ ಬದಲಾವಣೆ ವಿಚಾರಕ್ಕೆ ಇನ್ನು ಇತಿಶ್ರೀ ಹಾಡಬೇಕು. ಸಿಎಂ ಹೇಳಿರುವುದರಲ್ಲಿ ಹೊಸದೇನಿಲ್ಲ. ಈಗ ಹೇಳಬೇಕಾದ ಸಂದರ್ಭ ಬಂದಿದೆ. ಅದಕ್ಕೆ ಮುಖ್ಯಮಂತ್ರಿ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡರು.

ಮುಖ್ಯಮಂತ್ರಿ ಬದಲಾವಣೆ ಎಲ್ಲಿಯೂ ಚರ್ಚೆಯೇ ಆಗಿಲ್ಲ. ಅಧಿಕಾರ ಹಂಚಿಕೆ ಇಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಶಾಸಕರು ನಾಯಕತ್ವ ಬದಲಾವಣೆ ಮಾಡಿ ಅಂದಿಲ್ಲ. ಸುರ್ಜೆವಾಲಾ ಮುಂದೆ ಎಲ್ಲಾ ಶಾಸಕರು ಅನುದಾನದ ಡಿಮ್ಯಾಂಡ್ ಮಾಡಿರಬಹುದು. ಕೇವಲ 10% ಮಂದಿ ನಾಯಕತ್ವದ ಬದಲಾವಣೆ ಬಗ್ಗೆ ಮಾತಾಡಿರಬಹುದು. ಒಂದು 20 ಜನ ಹೇಳಿರಬಹುದು ಅಷ್ಟೇ. ಮುಖ್ಯಮಂತ್ರಿ ಆಯ್ಕೆ ಮಾಡುವಾಗ ವೋಟಿಂಗ್​ ಆಗಿತ್ತು. ವೋಟ್​ ಹೆಚ್ಚಿದೆ ಎಂದು ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬೆಂಬಲಕ್ಕೆ ಹೆಚ್ಚು ಶಾಸಕರಿದ್ದಾರೆ. ಇದಕ್ಕೆಲ್ಲ ಇತಿಶ್ರೀ ಹಾಡಬೇಕು. ಅದಕ್ಕೆ ಮುಖ್ಯಮಂತ್ರಿ ಸ್ಪಷ್ಟವಾಗಿ ಸಂದೇಶ ಕೊಟ್ಟಿದ್ದಾರೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande