ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಒಂದು ನಾಟಕ : ಜಿ. ಪರಮೇಶ್ವರ್
ಬೆಂಗಳೂರು, 10 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಎನ್ನುವುದು ಮಾಧ್ಯಮಗಳ ನಿರ್ಮಿತ ನಾಟಕ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಒಂದು ನಾಟಕ, ಇದರ ಬಗ್ಗೆ ಪದೇಪದೆ ಚರ್ಚೆ ಮಾಡುವ ಅಗತ್ಯವೇ ಇಲ್
Parmeshwar


ಬೆಂಗಳೂರು, 10 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಎನ್ನುವುದು ಮಾಧ್ಯಮಗಳ ನಿರ್ಮಿತ ನಾಟಕ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಒಂದು ನಾಟಕ, ಇದರ ಬಗ್ಗೆ ಪದೇಪದೆ ಚರ್ಚೆ ಮಾಡುವ ಅಗತ್ಯವೇ ಇಲ್ಲ ಎಂದು ಹೇಳಿದರು.

ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ. ಸಿದ್ದರಾಮಯ್ಯ ಸರಕಾರ ಸುಗಮವಾಗಿ ಆಡಳಿತ ನಡೆಸುತ್ತಿದೆ. ನಾನು ಶಾಂತವಾಗಿ ಕೆಲಸ ಮಾಡುತ್ತಿದ್ದೇನೆ. ನಾಟಕ ಕಂಪನಿ ಓಪನ್ ಮಾಡೋಕೆ ನನಗೆ ಆಸಕ್ತಿ ಇಲ್ಲ ಎಂದು ಅವರು ವ್ಯಂಗ್ಯವಾಡಿದರು.

ನಮ್ಮ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಅವಶ್ಯಕತೆ ಬಂದಾಗ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈಗ ಅಂತ ಸಂದರ್ಭವಿದೆಯೆ ಎಂಬುದರ ಬಗ್ಗೆ ನಾನು ಹೇಳುವುದಿಲ್ಲ ಎಂದು ಗೃಹ ಸಚಿವ ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande