ವಿವಾಹದ ವಿವಾದ : ಪ್ರೇಮಿಗಳ ಆತ್ಮಹತ್ಯೆ
ಕೊಪ್ಪಳ, 10 ಜುಲೈ (ಹಿ.ಸ.) : ಆ್ಯಂಕರ್ : ಪ್ರೇಮಿಗಳಿಬ್ಬರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಡ್ಯಾಂನಲ್ಲಿರುವ ಎಡದಂಡೆ ಕಾಲುವೆ ಬಳಿ ನಡೆದಿದೆ. ಮೃತರನ್ನು ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದ ಪ್ರವೀಣ್ ಕುಮಾರ್ (19) ಹಾಗೂ ಸಣಾಪುರ ಗ್ರಾಮದ ಅಂ
ವಿವಾಹದ ವಿವಾದ : ಪ್ರೇಮಿಗಳ ಆತ್ಮಹತ್ಯೆ


ಕೊಪ್ಪಳ, 10 ಜುಲೈ (ಹಿ.ಸ.) :

ಆ್ಯಂಕರ್ : ಪ್ರೇಮಿಗಳಿಬ್ಬರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಡ್ಯಾಂನಲ್ಲಿರುವ ಎಡದಂಡೆ ಕಾಲುವೆ ಬಳಿ ನಡೆದಿದೆ.

ಮೃತರನ್ನು ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದ ಪ್ರವೀಣ್ ಕುಮಾರ್ (19) ಹಾಗೂ ಸಣಾಪುರ ಗ್ರಾಮದ ಅಂಜಲಿ (18) ಎಂದು ಪೊಲೀಸರು ತಿಳಿಸಿದ್ದಾರೆ.

ಇವರಿಬ್ಬರು ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಮನೆ ಬಿಟ್ಟು ಓಡಿ ಹೋಗಿದ್ದರು. ನಂತರ ಪೋಷಕರು ಮದುವೆ ಮಾಡಿ ಕೊಡುವ ಭರವಸೆ ನೀಡಿದ್ದರಿಂದ ಮನೆಗೆ ಹಿಂದಿರುಗಿ,‌ ನಿರಂತರ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande