ಮುಡಾ ಹಗರಣ : ಮುಖ್ಯಮಂತ್ರಿ ಪತ್ನಿಗೆ ನೋಟಿಸ್ ಜಾರಿ
ಬೆಂಗಳೂರು, 10 ಜುಲೈ (ಹಿ.ಸ.) : ಆ್ಯಂಕರ್ : ಮುಡಾ ಪ್ರಕರಣದ ಮೇಲ್ಮನವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ. ಎಂ. ಪಾರ್ವತಿ, ಅವರ ಸಹೋದರ ಬಿ. ಎಂ. ಮಲ್ಲಿಕಾರ್ಜುನ ಸ್ವಾಮಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಮೈಸೂರಿನ ವಿಜಯನಗರ ಠಾಣಾಧಿಕಾರಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.
Court


ಬೆಂಗಳೂರು, 10 ಜುಲೈ (ಹಿ.ಸ.) :

ಆ್ಯಂಕರ್ : ಮುಡಾ ಪ್ರಕರಣದ ಮೇಲ್ಮನವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ. ಎಂ. ಪಾರ್ವತಿ, ಅವರ ಸಹೋದರ ಬಿ. ಎಂ. ಮಲ್ಲಿಕಾರ್ಜುನ ಸ್ವಾಮಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಮೈಸೂರಿನ ವಿಜಯನಗರ ಠಾಣಾಧಿಕಾರಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.

ಮೂಲ ದೂರುದಾರ ಸ್ನೇಹಮಯಿ ಕೃಷ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಮೀನಿನ ಮೂಲಕ ಮಾಲೀಕ ಜೆ. ದೇವರಾಜು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ, ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತು.

ವಿಚಾರಣೆವೇಳೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ಅರ್ಜಿಯಲ್ಲಿ ಬಿ ಎಂ ಪಾರ್ವತಿ ಅವರಿಗೆ ನೋಟಿಸ್ ಜಾರಿಯಾಗಿಲ್ಲ. ಜತೆಗೆ, ರಾಜ್ಯಪಾಲರ ಆದೇಶ ಎತ್ತಿ ಹಿಡಿಯುವಾಗ ಏಕಸದಸ್ಯ ಪೀಠದ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ ಎದುರಿಸುವಂತೆ ಮಾಡಿರುವ ಆದೇಶ ಬದಿಗೆ ಸರಿಸಲು ಕೋರಿ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿಯಲ್ಲಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ಪೊಲೀಸ್ ಮಹಾನಿರ್ದೇಶಕರು ಹಾಗೂ ಮೈಸೂರಿನ ವಿಜಯನಗರ ಠಾಣಾಧಿಕಾರಿಗೆ ನೋಟಿಸ್ ಜಾರಿಯಾಗಿಲ್ಲ. ಹೀಗಾಗಿ, ಎಲ್ಲರಿಗೂ ನೋಟಿಸ್ ಮತ್ತು ಸಮನ್ಸ್ ಜಾರಿ ಮಾಡುವಂತೆ ನಿರ್ದೇಶಿಸಿದ ನ್ಯಾಯಾಲಯವು, ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ತನಿಖೆಗೆ ಅನುಮತಿಸಿದ್ದ ಆದೇಶ ಏಕಸದಸ್ಯ ಪೀಠವು 2024ರ ಸೆಪ್ಟೆಂಬರ್ 24ರಂದು ಎತ್ತಿ ಹಿಡಿದಿತ್ತು. ಆನಂತರ ಒಂದು ತಿಂಗಳ ಬಳಿಕ ಸಿದ್ದರಾಮಯ್ಯ ಅವರು ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ಏಕಸದಸ್ಯ ಪೀಠದ ಆದೇಶ ಹೊರಬಿದ್ದು ಹತ್ತು ತಿಂಗಳಾಗಿದ್ದು ಮೇಲ್ಮನವಿಗಳ ವಿಚಾರಣೆ ಇನ್ನಷ್ಟೇ ಆರಂಭವಾಗಬೇಕಿದೆ. ಪ್ರಕರಣದ ಸಂಬಂಧ ಒಟ್ಟಾರೆ ನಾಲ್ಕು ಮೇಲ್ಮನವಿಗಳು ಸಲ್ಲಿಕೆಯಾಗಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande