ಗದಗ, 10 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಚರಿಸಲಾಯಿತು.
ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರುಗಳು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಶ್ರೀ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಅಧ್ಯಕ್ಷ ಮೋಹನ ಈ ಚಂದಪ್ಪನವರ, ಉಪಾಧ್ಯಕ್ಷ ಕಲ್ಲೇಶಪ್ಪ ಹಡಪದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ವಿ ಪ್ರಭು, ಗದಗ ತಾಲೂಕ ಅಧ್ಯಕ್ಷ ಕಲ್ಲಪ್ಪ ಹಡಪದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Lalita MP