ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ
ಗದಗ, 10 ಜುಲೈ (ಹಿ.ಸ.) : ಆ್ಯಂಕರ್ : ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಒಳಹರಿವಿನ ಪ್ರಮಾಣ 20,000-25,000 ಕ್ಯೂಸೆಕ್ಸ್ ಇದ್ದು, ಯಾವ ಸಮಯದಲ್ಲಾದರೂ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದ್ದು, ಆಣಿಕಟ್ಟು ಸುರಕ್ಷತೆ
ಪೋಟೋ


ಗದಗ, 10 ಜುಲೈ (ಹಿ.ಸ.) :

ಆ್ಯಂಕರ್ : ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಒಳಹರಿವಿನ ಪ್ರಮಾಣ 20,000-25,000 ಕ್ಯೂಸೆಕ್ಸ್ ಇದ್ದು, ಯಾವ ಸಮಯದಲ್ಲಾದರೂ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದ್ದು, ಆಣಿಕಟ್ಟು ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಮುಖಾಂತರ ನದಿಗೆ ಬಿಡಲಾಗುವುದು. ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರಿನ ಸಂಗ್ರಹಣೆ ಕುರಿತು ಪಾಲನೆ ಮಾಡಲಾಗುತ್ತಿದೆ.

ರೂಲ್ ಕರ್ವ ಪ್ರಕಾರ ಜಲಾಶಯದಲ್ಲಿರುವ ನೀರಿನ ಸಂಗ್ರಹ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾದಲ್ಲಿ ಹೆಚ್ಚುವರಿ ನೀರನ್ನು ಹೊರಬಿಡಬೇಕಾಗಿರುತ್ತದೆ. ಅದರಂತೆ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕಾಗಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರು ಸಹಕರಿಸಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande