ಕಲಬುರಗಿ, 10 ಜುಲೈ (ಹಿ.ಸ.) :
ಆ್ಯಂಕರ್ : ಕಲಬುರಗಿ ಕಂದಾಯ ವಿಭಾಗದ ನೂತನ ಪ್ರಾದೇಶಿಕ ಆಯುಕ್ತರಾಗಿ
2013ರ ಕರ್ನಾಟಕ ಕೇಡರ್ ಐ.ಎ.ಎಸ್ ಅಧಿಕಾರಿ ಜಹೀರಾ ನಸೀಮ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಪ್ರಾದೇಶಿಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣ ಭಾಜಪೇಯಿ ಸ್ಥಾನಕ್ಕೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಹೀರಾ ನಸೀಮ್ ಅವರನ್ನು ಸರ್ಕಾರ ಮಂಗಳವಾರ ವರ್ಗಾಯಿಸಿ ಆದೇಶ ಹೊರಡಿಸಿತ್ತು.
ಮೂಲತ ರಾಜ್ಯದ ಧಾರವಾಡ ಜಿಲ್ಲೆಯವರಾಗಿರುವ ಜಹೀರಾ ನಸೀಮ್ ಅವರು ಎಂ.ಎಸ್ಸಿ(ಎಂ.ಫಿಲ್) ಪದವೀಧರರಾಗಿದ್ದಾರೆ. ಧಾರವಾಡ, ತರಿಕೆರೆ ಸಹಾಯಕ ಅಯುಕ್ತರಾಗಿ, ಹಾವೇರಿ ಅಪರ ಜಿಲ್ಲಾಧಿಕಾರಿಯಾಗಿ, ಬೀದರ ಜಿಲ್ಲಾ ಪಂಚಾಯತ್ ಸಿ.ಇ.ಓ, ನಗರ ಭೂ ಸಾರಿಗೆ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಇವರು, ಈ ಹಿಂದೆ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರ ನಿರ್ದೇಶಕರಾಗಿ ಮತ್ತು ಅಪರ ಪ್ರಾದೇಶಿಕ ಅಯುಕ್ತರಾಗಿ ಕಾರ್ಯನಿರ್ವಹಿಸಿದ್ದು, ಇದೀಗ ಮತ್ತೆ ತೊಗರಿ ನಾಡಿನ ಸೇವೆಗೆ ಮರಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಪ್ರಿಯಾಂಕಾ ಹೊಸಮನಿ