ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಶೂನ್ಯ : ಅರಗ ಜ್ಞಾನೇಂದ್ರ
ಶಿವಮೊಗ್ಗ, 10 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಶೂನ್ಯವಾಗಿದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರು- ನೌಕರರಿಗೆ ಮುಖ್ಯಮಂತ್ರಿ ದೊಡ್ಡ ಆಶ್ವಾಸನೆ ಕೊಟ್ಟಿದ್ದರು.
ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಶೂನ್ಯ : ಅರಗ ಜ್ಞಾನೇಂದ್ರ


ಶಿವಮೊಗ್ಗ, 10 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಶೂನ್ಯವಾಗಿದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರು- ನೌಕರರಿಗೆ ಮುಖ್ಯಮಂತ್ರಿ ದೊಡ್ಡ ಆಶ್ವಾಸನೆ ಕೊಟ್ಟಿದ್ದರು. ಅದನ್ನು ಈಡೇರಿಸಲು ಸಾಧ್ಯವಾಗಿಲ್ಲ. ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಕಾರ್ಯಕರ್ತರಿಗೂ ಭರವಸೆ ನೀಡಿದ್ದರು. ಚುನಾವಣೆ ಸಂದರ್ಭದಲ್ಲಿ ಆಶ್ವಾಸನೆ ಕೊಟ್ಟಿದ್ದರು. ಆದರೆ ಸರ್ಕಾರ ಬಂದು ಎರಡು ವರ್ಷವಾದ್ರೂ ಈಡೇರಿಸಲು ಸಾಧ್ಯವಾಗಿಲ್ಲ ಎಂದರು.

ರಾಜ್ಯದಲ್ಲಿ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಅಭಿವೃದ್ಧಿ ಕಾರ್ಯ ಶೂನ್ಯವಾಗಿದೆ. ಈಗ ಸರ್ಕಾರ ನಡೆದರೆ ಸಾಕು ಎಂಬಂತಾಗಿದೆ. ಆಸ್ಪತ್ರೆಯಲ್ಲಿ ಡಿ- ದರ್ಜೆ ನೌಕರರಿಗೂ ಸಂಬಳವಿಲ್ಲದೆ ನಾಲ್ಕು ತಿಂಗಳಾಗಿದೆ. ಈ ಸರ್ಕಾರದಲ್ಲಿ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande