ಬಳ್ಳಾರಿ, 11 ಜುಲೈ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಿಧಾನ ಪರಿಷತ್ ನಲ್ಲಿ 4 ಬಾರಿ ಎಂ.ಎಲ್.ಸಿ ಯಾಗಿ ಸೇವೆ ಸಲ್ಲಿಸಿ ಸಭಾಪತಿಗಳಾಗಿಯೂ ಸೇವೆ ಸಲ್ಲಿಸಿದ್ದ ಬಳ್ಳಾರಿ ಜಿಲ್ಲೆಯ ಹಿರಿಯ ಮುತ್ಸದ್ದಿ,ಹಾಗೂ 2012 ರಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಎನ್ ತಿಪ್ಪಣ್ಣ ಲಿಂಗೈಕ್ಯರಾದ ಸುದ್ದಿ ತಿಳಿದು ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಂತಾಪ ಸೂಚಿಸಿದ್ದಾರೆ
ಅವರಿಗೆ 97 ವರ್ಷ ವಯಸ್ಸು ಆಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಳ್ಳಾರಿ ನಿವಾಸದಲ್ಲಿ ನೆಲೆಸಿದ್ದರು. ಅವರು ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ತುರವಿನೂರು ಸ್ವಗ್ರಾಮದಲ್ಲೇ ಅವರ ಶನಿವಾರ ಅತ್ಯಾಸಂಸ್ಕಾರ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ
ಹಲವು ವರ್ಷಗಳ ಕಾಲ ಜಿಲ್ಲೆಯಲ್ಲಿ ವಕೀಲರಾಗಿ ಕಾರ್ಯ ನಿರ್ಹಹಿಸಿ ಪ್ರಸಿದ್ಧರಾಗಿದ್ದ ಅವರು ನಂತರ ರಾಜಕೀಯ ಜೀವನಕ್ಕೆ ಕಾಲಿಟ್ಟು ಅಪಾರ ಜನಬೆಂಬಲ ಪಡೆದಿದ್ದರೂ ರಾಮಕೃಷ್ಣ ಹೆಗಡೆ ಅವರೊಂದಿಗೆ ಗುರುತಿಸಿಕೊಂಡಿದ್ದ ಎನ್. ತಿಪ್ಪಣ್ಣ ರವರು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು,ಬಳಿಕ ಜೆ. ಎಸ್. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
2012 ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆಯಾಗಿ ಜಿಲ್ಲೆಯ ಲಿಂಗಾಯಿತ ಸಮಾಜದ ಅಗ್ರಗಣ್ಯ ನಾಯಕರಾಗಿ ಸಮಾಜ ಸಂಘಟನೆ ಮಾಡಿದ್ದರು. ಸುಮಾರು 20 ವರ್ಷಗಳ ಕಾಲ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್