ನವದೆಹಲಿ, 11 ಜುಲೈ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. 16ನೇ ಉದ್ಯೋಗ ಮೇಳದ ಭಾಗವಾಗಿ ದೇಶದಾದ್ಯಂತ 47 ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವಿವಿಧ ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಕರ್ತವ್ಯಕ್ಕೆ ಮುಂದಾಗಲಿದ್ದಾರೆ.
ಈ ನೇಮಕಾತಿ ಪ್ರಕ್ರಿಯೆಯಲ್ಲಿ ರೈಲ್ವೆ, ಗೃಹ ವ್ಯವಹಾರಗಳು, ಅಂಚೆ, ಆರೋಗ್ಯ, ಹಣಕಾಸು ಸೇವೆಗಳು, ಮತ್ತು ಕಾರ್ಮಿಕ-ಉದ್ಯೋಗ ಸಚಿವಾಲಯಗಳ ಭಾಗವಹಿಸಿವೆ. ಈ ಉಪಕ್ರಮವು ಯುವಕರಿಗೆ ಉದ್ಯೋಗಾವಕಾಶ ಒದಗಿಸಲು ಪ್ರಧಾನಿ ಮೋದಿ ಯವರ ಬದ್ಧತೆಯ ಭಾಗವಾಗಿದ್ದು, ಈವರೆಗೆ 10 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa