ಜನಸಂಖ್ಯಾ ನಿಯಂತ್ರಣ ಸಾಮಾಜಿಕ ಹೊಣೆಗಾರಿಕೆ ಆಗಬೇಕಿದೆ : ಡಾ.ಶಂಕರ್
ಹೊಸಪೇಟೆ, 11 ಜುಲೈ (ಹಿ.ಸ.) : ಆ್ಯಂಕರ್ : ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ ಮತ್ತು ಜನಸಂಖ್ಯಾ ಸ್ಪೋಟದಿಂದಾಗುವ ಅಪಾಯಗಳು, ಕುಟುಂಬ ಯೋಜನೆಗೆ ಆದ್ಯತೆ, ಲಿಂಗ ಅಸಮಾನತೆ, ಬಡತನ, ಶಿಶು ಮರಣ, ಮಾನವ ಹಕ್ಕುಗಳು ಸೇರಿ ಇತರೆ ಸಂಗತಿಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ಜನಸಂಖ್ಯಾ ದಿನಾಚರಣೆಯ ಮು
ಜನಸಂಖ್ಯಾ ನಿಯಂತ್ರಣ ಸಾಮಾಜಿಕ ಹೊಣೆಗಾರಿಕೆ ಆಗಬೇಕಿದೆ :ಡಾ.ಶಂಕರ್


ಹೊಸಪೇಟೆ, 11 ಜುಲೈ (ಹಿ.ಸ.) :

ಆ್ಯಂಕರ್ : ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ ಮತ್ತು ಜನಸಂಖ್ಯಾ ಸ್ಪೋಟದಿಂದಾಗುವ ಅಪಾಯಗಳು, ಕುಟುಂಬ ಯೋಜನೆಗೆ ಆದ್ಯತೆ, ಲಿಂಗ ಅಸಮಾನತೆ, ಬಡತನ, ಶಿಶು ಮರಣ, ಮಾನವ ಹಕ್ಕುಗಳು ಸೇರಿ ಇತರೆ ಸಂಗತಿಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ಜನಸಂಖ್ಯಾ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಂಕರ್ ನಾಯ್ಕ ಹೇಳಿದ್ದಾರೆ.

ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ವಿಶ್ವದಾದ್ಯಂತ ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ಆಚರಣೆ ಬಳಿಕ ಜನಸಂಖ್ಯೆ ಬೆಳವಣಿಗೆಯಲ್ಲಿ ಕುಸಿತ ಕಂಡುಬಂoದಿದೆ. ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಪ್ರಸ್ತುತ ದಿನಗಳಲ್ಲಿ ಅತಿ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದರು.

ಜನಸಂಖ್ಯಾ ದಿನವನ್ನು ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ದಿನವನ್ನು ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

.ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ ಮಾತನಾಡಿ, ವಿಜಯನಗರ ಜಿಲ್ಲೆ ಜನಸಂಖ್ಯೆ 2025 ರ ಅಂದಾಜು 24.48 ಲಕ್ಷಗಳು ಇದೆ. ಜನಸಂಖ್ಯೆ ನಿಯಂತ್ರಣವನ್ನು ತಾತ್ಕಾಲಿಕ ವಿಧಾನದಿಂದ ಅಂತರ ಕಾಪಾಡಿಕೊಂಡರೆ ಸದೃಢ ಮಕ್ಕಳು ಜನಿಸಲು ಅನುಕೂಲವಾಗುತ್ತದೆ. ‘ತಾಯಿಯಾಗುವ ವಯಸ್ಸು : ದೇಹ ಮತ್ತು ಮನಸ್ಸಿನ ಸಿದ್ದತೆ’ ತಾಯಂದಿರಿಗೆ ಹೆರಿಗೆ ಅಂತರದ ವಿಧಾನಗಳ ಬಗ್ಗೆ ಕಾಪರಟಿ, ನಿರೋಧ್, ಪಿಪಿಐಸಿಯುಡಿ, ಐಯುಡಿ ಮಾತ್ರೆಗಳ ಬಳಕೆ ಮತ್ತು ಚುಚ್ಚುಮದ್ದು(ಎಂಪಿಎ) ಹಾಗೂ ಮಹಿಳೆಯರಿಗೆ ಸಂತಾನ ಹರಣ ಶಸ್ತçಚಿಕಿತ್ಸೆಯ ಲ್ಯಾಪ್ರೋಸ್ಕೋಪ ಹಾಗೂ ಪುರುಷರಿಗೆ ಸಂತಾನ ಹರಣ ಶಸ್ತç ಚಿಕಿತ್ಸೆ, ನೋ ಸ್ಕಾಲ್ ಪೆಲ್ ವ್ಯಾಸೆಕ್ಟಮಿ ಬಗ್ಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಈ ವೇಳೆ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ.ರಾಧಿಕಾ, ಜಿಲ್ಲಾ ಆರೋಗ್ಯ ನೀರಿಕ್ಷಣಾಧಿಕಾರಿ ಎಂ.ಧರ್ಮನಗೌಡ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ.ನೂರ್ ಬಾಷಾ, ಶುಶ್ರೂಣಾಧಿಕಾರಿ ವೀಣಾ ಆರೋಗ್ಯ ಸಿಬ್ಬಂದಿ ಸಹದೇವ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande