ವಿಜಯಪುರ, 11 ಜುಲೈ (ಹಿ.ಸ.) :
ಆ್ಯಂಕರ್ : ವಿಜಯಪುರ: ಜಿಲ್ಲಾಡಳಿತ ವತಿಯಿಂದ ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ನಾನಾ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಸಮಾರಂಭ ಜುಲೈ 14ರಂದು ಇಂಡಿ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ನಾನಾ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸಲಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಉಪಸ್ಥಿತರಿರಲಿದ್ದು, ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಸೇರಿದಂತೆ ನಾನಾ ಇಲಾಖೆಯ ಸಚಿವರು, ಶಾಸಕರು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಅಂದು ನಡೆಯುವ ಕಾರ್ಯಕ್ರಮದಲ್ಲಿ ಜಲ ಸಂಪನ್ಮೂಲ ಇಲಾಖೆಯ ವತಿಯಿಂದ 232.44 ಕೋಟಿ ವೆಚ್ಚದಲ್ಲಿ ಇಂಡಿ ಮತ್ತು ಚಡಚಣ ತಾಲೂಕಿನ 19 ಕೆರೆಗಳನ್ನು ತುಂಬುವ ಯೋಜನೆ, ಆರ್‍ಡಿಡಬ್ಲ್ಯೂಎಸ್ ಹಾಗೂ ಎಸ್ ಇಲಾಖೆಯ 9.10ಕೋಟಿ ರೂ. ವೆಚ್ಚದ ಜಲ ಜೀವನ ಮಿಷನ್ ಬ್ಯಾಚ್-1ರ 31 ಕಾಮಗಾರಿಗಳು, 80.32 ಕೋಟಿ ವೆಚ್ಚದ ಜಲ ಜೀವನ ಮಿಷನ್ ಬ್ಯಾಚ್-2ರ 67 ಕಾಮಗಾರಿಗಳು, 12 ಕೋಟಿ ವೆಚ್ಚದ ಜಲ ಜೀವನ ಮಿಷನ್ ಬ್ಯಾಚ್-3ರ 19 ಕಾಮಗಾರಿಗಳು ಹಾಗೂ 3.23 ಕೋಟಿ ವೆಚ್ಚದ ಜಲ ಜೀವನ ಮಿಷನ್ ಬ್ಯಾಚ್-4ರ 9 ಕಾಮಗಾರಿಗಳು ಲೋಕಾರ್ಪಣೆ ನೆರವೇರಲಿದೆ.
ನಗರಾಭಿವೃದ್ಧಿ ಇಲಾಖೆ ವತಿಯಿಂದ 30 ಕೋಟಿ ರೂ. ವೆಚ್ಚದಲ್ಲಿ ಇಂಡಿ ನಗರದಲ್ಲಿ ನೂತನವಾಗಿ ನಿರ್ಮಾಣವಾದ 244 ವಾಣಿಜ್ಯ ಮಳಿಗೆಗಳ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಮಾರುಕಟ್ಟೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ 6.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, 2.15 ಕೋಟಿ ರೂ. ವೆಚ್ಚದಲ್ಲಿ ಇಂಡಿ ನಗರದ ಪ್ರಗತಿ ಕಾಲೋನಿ ಸಿ.ಸಿ.ರಸ್ತೆ, 1.52 ಕೋಟಿ ರೂ. ವೆಚ್ಚದ ಇಂಡಿ ಮತಕ್ಷೇತ್ರದ ಹೊರ್ತಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿಗಳಿಗೆ ಹೆಚ್ಚುವರಿ ಕೊಠಡಿಗಳು ಹಾಗೂ ಮೂಲಭೂತ ಸೌಕರ್ಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 10 ಕೋಟಿ ರೂ. ವೆಚ್ಚದಲ್ಲಿ ಇಂಡಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆ ಲೋಕಾರ್ಪಣೆ ನೆರವೇರಲಿದೆ.
ಸಣ್ಣ ನೀರಾವರಿ ಇಲಾಖೆ ವತಿಯಿಂದ 3 ಕೋಟಿ ರೂ. ವೆಚ್ಚದಲ್ಲಿ ಮಿರಗಿ ಗ್ರಾಮದ ಹಳ್ಳಕ್ಕೆ ಬ್ರಿಡ್ಜ್ ಕಂ. ಬ್ಯಾರೇಜ್, 1 ಕೋಟಿ ರೂ. ವೆಚ್ಚದಲ್ಲಿ ಇಂಡಿ ನಗರದ ಹೀರೇ ಇಂಡಿ ಹನುಮಾನ ಗುಡಿಯಿಂದ ಜಲದಪ್ಪನ ಕೆರೆವರೆಗೆ ಹಳ್ಳದ ಅಭಿವೃದ್ಧಿ, 1 ಕೋಟಿ ರೂ. ವೆಚ್ಚದಲ್ಲಿ ಆಳೂರ ಗ್ರಾಮದಲ್ಲಿ ಸರ್ವೆ ನಂ. 128 ರಲ್ಲಿ ಬಾಂದಾರ, 1 ಕೋಟಿ ರೂ. ವೆಚ್ಚದಲ್ಲಿ ನಿಂಬಾಳ ಗ್ರಾಮದ ಸಣ್ಣ ನೀರಾವರಿ ಕೆರೆ ಅಭಿವೃದ್ಧಿ, 50 ಲಕ್ಷ ರೂ. ವೆಚ್ಚದಲ್ಲಿ ಹಿರೇಬೇವನೂರ ಗ್ರಾಮದ ಇಂಗು ಕೆರೆ ಅಭಿವೃದ್ಧಿ, 50 ಲಕ್ಷ ರೂ. ವೆಚ್ಚದಲ್ಲಿ ಹಡಲಸಂಗ ಗ್ರಾಮದ ಸಣ್ಣ ನೀರಾವರಿ ಕೆರೆ ಅಭಿವೃದ್ಧಿ, ಕಾಲೇಜು ಇಲಾಖೆ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ಝುಳಕಿಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು, 1.75 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂಡಿ, ಶಿಕ್ಷಣ ಇಲಾಖೆ ವತಿಯಿಂದ 1.46 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಪ್ರೌಢ ಶಾಲೆ ಕಟ್ಟಡ ಸಾತಲಗಾಂವ ಪಿ.ಆಯ್., ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ 66 ಲಕ್ಷ ರೂ. ವೆಚ್ಚದಲ್ಲಿ ಇಂಡಿ ತಾಲೂಕಿನ 4 ಅಂಗನವಾಡಿ ಕಟ್ಟಡಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 1.20 ಕೋಟಿ ರೂ. ವೆಚ್ಚದಲ್ಲಿ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಅಗರಖೇಡ ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿಗಳ ವಸತಿ ಗೃಹ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ಝಳಕಿ ಡಿಪೆÇ್ಲೀಮಾ ಕಾಲೇಜಿನ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಒಟ್ಟು 401.33 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿಗಳ ಲೋಕಾರ್ಪಣೆ ನೆರವೇರಲಿದೆ.
ಶಂಕುಸ್ಥಾಪನೆ ಕಾಮಗಾರಿಗಳು : ಜಲ ಸಂಪನ್ಮೂಲ ಇಲಾಖೆ ವತಿಯಿಂದ 818.80 ಕೋಟಿ ರೂ. ವೆಚ್ಚದ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಹಂತ-1, 880.67 ಕೋಟಿ ರೂ. ವೆಚ್ಚದ ಹಂತ-2, 1400 ಕೋಟಿ ರೂ. ವೆಚ್ಚದ ಹಂತ 3 ಕಾಮಗಾರಿ, 534 ಕೋಟಿ ರೂ. ವೆಚ್ಚದಲ್ಲಿ ತಿಡಗುಂದಿ ಶಾಖಾ ಕಾಲುವೆಯ ವಿಸ್ತರಣೆ ಕಿ.ಮೀ. 56.00 ರಿಂದ 65.58 ವರೆಗಿನ ವಿತರಣಾ ಜಾಲ ನಿರ್ಮಾಣದ ಕಾಮಗಾರಿ, ಲೋಕೋಪಯೋಗಿ ಇಲಾಖೆ ವತಿಯಿಂದ 255 ಕೋಟಿ ರೂ. ವೆಚ್ಚದ ಚಡಚಣ-ಗಾಣಗಾಪೂರ (115 ಕಿ.ಮೀ.) ರಸ್ತೆ ಅಭಿವೃದ್ಧಿ (ಇಂಡಿ ಮತಕ್ಷೇತ್ರದ 48 ಕಿ.ಮೀ.), 65.40ಕೋಟಿ ರೂ. ವೆಚ್ಚದ (ಪಡನೂರ-ಅಂಕಲಗಿ) ಭೀಮಾ ನದಿಗೆ ಸೇತುವೆ ಕಾಮಗಾರಿ, 10 ಕೋಟಿ ರೂ. ವೆಚ್ಚದ, ಇಂಡಿ ರೈಲು ನಿಲ್ಯಾಣದಿಂದ ಹಲಸಂಗಿ ರಾಷ್ಟ್ರೀಯ ಹೆದ್ದಾರಿವರೆಗೆ ರಸ್ತೆ ಸುಧಾರಣೆ ಕಾಮಗಾರಿ (ಓಊ-52), 6.50 ಕೋಟಿ ರೂ. ವೆಚ್ಚದ ಔರಾದ ಸದಾಶಿವಗಡ ರಾಜ್ಯ ಹೆದ್ದಾರಿ 34 ರಸ್ತೆ ಸುಧಾರಣೆ ಕಾಮಗಾರಿ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ 73.75 ಕೋಟಿ ರೂ. ವೆಚ್ಚದಲ್ಲಿ ಇಂಡಿ ಪಟ್ಟಣದಲ್ಲಿ ಜಿ.ಟಿ.ಟಿ.ಸಿ. ಕಾಲೇಜು ನಿರ್ಮಾಣ ಕಾಮಗಾರಿ, ಪಿ.ಆರ್.ಇ.ಡಿ ಇಲಾಖೆ ವತಿಯಿಂದ 21 ಕೋಟಿ ರೂ. ವೆಚ್ಚದಲ್ಲಿ ಪ್ರಗತಿ ಪಥ ಯೋಜನೆಯಡಿ ರಸ್ತೆ ಕಾಮಗಾರಿ, 10 ಕೋಟಿ ರೂ. ವೆಚ್ಚದ ಅತಿವೃಷ್ಠಿಯಿಂದ ಹಾನಿಗೊಳಗಾದ ರಸ್ತೆ ಅಭಿವೃದ್ಧಿ ಕಾಮಗಾರಿ ಲೆಕ್ಕೆ ಶಿರ್ಷಿಕೆ 5054, 1ಕೋಟಿ ರೂ. ವೆಚ್ಚದ ಶುಗರ್ ಸೆಸ್ ಅನುದಾನದಡಿ ಹಲಸಂಗಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ 7 ಕೋಟಿ ರೂ. ವೆಚ್ಚದ ಡಾ. ಬಿ. ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಲಚ್ಯಾಣ ಗ್ರಾಮದ ಬಾಲಕರ ವಸತಿ ನಿಲಯ ಕಾಮಗಾರಿ, 1.60 ಕೋಟಿ ರೂ. ವೆಚ್ಚದ ಇಂಡಿ ತಾಲೂಕಿನ ಗಣವಲಗಾ ಗುಬ್ಬೇವಾಡ, ಮಿರಗಿ, ಭೀಮನಗರ ಚಿಕ್ಕಮಣೂರ ಸಾತಲಗಾಂವ ನಾದ ಕೆ.ಡಿ. ರೋಡಗಿ, ಹಿಂಗಣಿ, ಗ್ರಾಮ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿ, 1.33 ಕೋಟಿ ರೂ. ವೆಚ್ಚದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿಗಳಿಗೆ ಹೆಚ್ಚುವರಿ ಕೊಠಡಿಗಳು ಹಾಗೂ ಮೂಲಭೂತ ಸೌಕರ್ಯ (ಹಳಗುಣಕಿ ಹಿರೇಬೇವನೂರ ಹೊರ್ತಿ, ಇಂಡಿ ನಗರ) ಕಾಮಗಾರಿ, 1 ಕೋಟಿ ರೂ. ವೆಚ್ಚದ ಇಂಡಿ ತಾಲೂಕಿನ ವಿವಿಧ ಗ್ರಾಮಗಳ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಮುಂದುವರೆದ ಕಾಮಗಾರಿ, 50 ಲಕ್ಷ ರೂ. ವೆಚ್ಚದ ಇಂಡಿ ನಗರದ ಶಿವಶರಣ ಹರಳಯ್ಯ ಸಮುದಾಯ ಭವನ ಕಾಮಗಾರಿ, 40 ಲಕ್ಷ ರೂ. ವೆಚ್ಚದ ಇಂಡಿ ತಾಲೂಕಿನ ಸಾಲೋಟಗಿ, ಮಿರಗಿ ಗ್ರಾಮಗಳ ಸ್ಮಶಾನ ಭೂಮಿ ಅಭಿವೃದ್ಧಿ ಕಾಮಗಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 8.66 ಕೋಟಿ ವೆಚ್ಚದ ಇಂಡಿಯಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಕಾಮಗಾರಿ, 1 ಕೋಟಿ ರೂ. ವೆಚ್ಚದಲ್ಲಿ ಇಂಡಿ ನಗರದ ಹುಸೇನಭಾಷ ದರ್ಗಾದ ಜೀರ್ಣೋದ್ವಾರಕ್ಕೆ ಹಾಗೂ ಮೂಲಭೂತ ಸೌಕರ್ಯಗಳ ನಿರ್ಮಾಣ ಕಾಮಗಾರಿ, 50 ಲಕ್ಷ ರೂ. ವೆಚ್ಚದಲ್ಲಿ ಇಂಡಿ ನಗರದ ಅಂಜುಮನ್ ಇಸ್ಲಾಂ ಸಂಸ್ಥೆಯ ಬಳಿ ಶಾದಿ ಮಹಲ್ ಕಾಮಗಾರಿ, 25 ಲಕ್ಷ ರೂ. ವೆಚ್ಚದಲ್ಲಿ ಇಂಡಿ ನಗರದ ಶ್ರೀ 1008 ಆದಿನಾಥ ದಿಗಂಬರ ಜೈನ್ ಮಂದಿರದ ಜೀರ್ಣೋದ್ದಾರ ಹಾಗೂ ಮೂಲಭೂತ ಸೌಕರ್ಯಗಳ ನಿರ್ಮಾಣ ಕಾಮಗಾರಿ, ಕೆಪಿಟಿಸಿಎಲ್ ವತಿಯಿಂದ 19.84 ಕೋಟಿ ರೂ.ಗಳ ವೆಚ್ಚದಲ್ಲಿ ಹÀಡಲಸಂಗ ಗ್ರಾಮದಲ್ಲಿ 2420 ಎಮ್.ವಿ.ಎ.110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಲಿದೆ.
ಸಣ್ಣ ಕೈಗಾರಿಕೆ ಇಲಾಖೆ ವತಿಯಿಂದ 19.30 ಕೋಟಿ ರೂ. ವೆಚ್ಚದಲ್ಲಿ ಇಂಡಿ ನಗರದ ಸಣ್ಣ ಕೈಗಾರಿಕಾ ಅಭಿವೃದ್ದಿ ಇಲಾಖೆ ವಸಾಹತು ನಿರ್ಮಾಣ, 3 ಕೋಟಿ ರೂ. ವೆಚ್ಚದಲ್ಲಿ ಭೀಮಾನದಿಗೆ ಅಡ್ಡಲಾಗಿರುವ ಭೂಯ್ಯಾರ ಸೇತುವೆ ಸಹಿತ ಬ್ಯಾರೇಜ್ ಗೇಟ್ ಅಳವಡಿಸುವ ಕಾಮಗಾರಿ, 1.50 ಕೋಟಿ ರೂ. ವೆಚ್ಚದಲ್ಲಿ ಭೀಮಾನದಿಗೆ ಅಡ್ಡಲಾಗಿರುವ ಹಿಂಗಣಿ-ಆಳಗಿ ಸೇತುವೆ ಸಹಿತ ಬ್ಯಾರೇಜ್ ಆಳವಡಿಸುವ ಕಾಮಗಾರಿ, 1 ಕೋಟಿ ರೂ. ವೆಚ್ಚದಲ್ಲಿ ಇಂಡಿ ತಾಲೂಕಿನ ರಾಜನಾಳ ಸಣ್ಣ ನೀರಾವರಿ ಕೆರೆ ಟೀಲ್ ಚಾನಲ್ ಕಾಮಗಾರಿ, 50 ಲಕ್ಷ ರೂ. ವೆಚ್ಚದಲ್ಲಿ ಹಿರೇಬೇವನೂರ ಗ್ರಾಮದ ಸರ್ವೆ ನಂ. 173/3, 192/6 ನೀರಾವರಿ ಸೌಲಭ್ಯ ಒದಗಿಸುವ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಲಿದೆ.
ಕೆ.ಆರ್.ಐ.ಡಿ.ಎಲ್. ಇಲಾಖೆ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ 2023-24ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ (10 ಕಾಮಗಾರಿಗಳು), 1.50 ಕೋಟಿ ರೂ. ವೆಚ್ಚದಲ್ಲಿ 2024-25ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ಕಾಮಗಾರಿಗಳು, ಶಿಕ್ಷಣ ಇಲಾಖೆಯಿಂದ 1.15 ಕೋಟಿ ರೂ. ವೆಚ್ಚದಲ್ಲಿ ತಡವಲಗಾ ಕೆ.ಜಿ.ಬಿ.ವಿ. ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿ, ಮುಜರಾಯಿ ಇಲಾಖೆಯಿಂದ ತಲಾ 1 ಕೋಟಿ ರೂ. ವೆಚ್ಚದಲ್ಲಿ ಇಂಡಿ ತಾಲೂಕಿನ ಲಚ್ಯಾಣ ಹಾಗೂ ಸಾಲೋಟಗಿ ಗ್ರಾಮದ ಶ್ರೀ ಸಿದ್ದಲಿಂಗ ಮಹಾರಾಜರ ಮಠದ ಜೀರ್ಣೋದ್ದಾರ ಮತ್ತು ಮೂಲಭೂತ ಸೌಕರ್ಯ ಕಾಮಗಾರಿ, ತಲಾ 13 ಲಕ್ಷ ರೂ. ವೆಚ್ಚದಲ್ಲಿ ಇಂಡಿ ನಗರದ ಶ್ರೀ ರಾಘವೇಂದ್ರ ದೇವಸ್ಥಾನ ಹಾಗೂ ಸತ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ದಾರ ಮತ್ತು ಮೂಲಭೂತ ಸೌಕರ್ಯ ಕಾಮಗಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ 0.76 ಲಕ್ಷ ರೂ. ಗಳ ವೆಚ್ಚದಲ್ಲಿ ಇಂಡಿ ತಾಲೂಕಿನ 5 ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ, ಯುವಜನ ಕ್ರೀಡಾ ಇಲಾಖೆ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ಇಂಡಿ ತಾಲೂಕಾ ಕ್ರೀಡಾಂಗಣದ ನಾನಾ ಅಭಿವೃದ್ಧಿ ಕಾಮಗಾರಿಗಳು, ಪಶುಸಂಗೋಪನಾ ಇಲಾಖೆಯಿಂದ ಪಡನೂರ ಹಾಗೂ ಮಿರಗಿ ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಪಶು ಚಿಕಿತ್ಸಾಲಯಗಳ ಕಟ್ಟಡ ನಿರ್ಮಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತಲಾ 50 ಲಕ್ಷ ರೂ. ವೆಚ್ಚದಲ್ಲಿ ಇಂಡಿ ನಗರದಲ್ಲಿ ಶ್ರೀ ಮಹಾತ್ಮ ಜ್ಯೋತಿಭಾ ಪುಲೆ ಹಾಗೂ ಶ್ರೀ ಮಹರ್ಷಿ ಭಗೀರಥ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಲಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande