ಬೆಂಗಳೂರು, 12 ಜುಲೈ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ ಪೊಲೀಸರನ್ನು ಬಲಿಪಶು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಯುಕ್ತರು, ಡಿಸಿಪಿ ಮೇಲೆ ಆರೋಪ ಹೊರೆಸಿ ಕೈ ತೊಳೆದುಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಗೃಹ ಸಚಿವರು ಎಲ್ಲ ಬಂದೋಬಸ್ತ್ ಮಾಡಿದ್ದರೆ, ಈ ಸಮಸ್ಯೆ ಆಗುತ್ತಿರಲಿಲ್ಲ. ಏನೂ ಮಾಡದೆ ಪೊಲೀಸರ ಮೇಲೆ ತಪ್ಪು ಹೊರಿಸಲಾಗಿದೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ತಪ್ಪು ಕೂಡ ಇಲ್ಲ. ಸರ್ಕಾರದ ಮೇಲೆ ಆರೋಪ ಬರಬಾರದೆಂದು ಮೊದಲೇ ಹೇಳಿ ವರದಿ ಬರೆಸಲಾಗಿದೆ. ಇದು ಯೋಗ್ಯವಾದ ವರದಿ ಅಲ್ಲ. ಕೋರ್ಟ್‌ನಲ್ಲಿ ಬರುವ ತೀರ್ಪಿನ ಬಗ್ಗೆ ಮಾತ್ರ ನಂಬಿಕೆ ಇದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa