ಬೆಂಗಳೂರು, 12 ಜುಲೈ (ಹಿ.ಸ.) :
ಆ್ಯಂಕರ್ : ಬಿಟ್ಟಿ ಪ್ರಚಾರದ ಅಮಲಿನಲ್ಲಿ ತೇಲಾಡುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಸುಳ್ಳು ಹೇಳುವ ಸ್ಪರ್ಧೆ ಏರ್ಪಟ್ಟಲ್ಲಿ ಪ್ರಥಮ ಬಹುಮಾನ ಪಡೆಯುವುದರಲ್ಲಿ ಅನುಮಾನವಿಲ್ಲ ಎಂದು ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ.
ಕೆಎಸ್‌ಪಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಎಕ್ಸ್‌ನಲ್ಲಿ ಪ್ರಕಟಿಸಿ ಡಿಸಿಎಂ ಬಿಲ್ಡಪ್ ಕೊಟ್ಟಿದ್ರು.! ಆದರೆ, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸರ್ಕಾರದಿಂದ ಗಂಡು ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿ ಇಲ್ಲ ಅಂತ ಸ್ಪಷ್ಟಪಡಿಸಿ, ಡಿಸಿಎಂ ಹಸ್ತಕ್ಷೇಪಕ್ಕೆ ಮಂಗಳಾರತಿ ಎತ್ತಿದ್ದಾರೆ.
ಮಾನ್ಯ ಡಿ.ಕೆ ಶಿವಕುಮಾರ್ ಅವರೇ, ನಿಮ್ಮ ಸೋಷಿಯಲ್ ಮೀಡಿಯಾ ಟೀಂನಲ್ಲಿ ಸಿದ್ದರಾಮಯ್ಯನವರ ಬೆಂಬಲಿಗರು ನುಸುಳಿ ಇದ್ದಾರೆಯೇ ಎಂಬುದನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.! ಇಲ್ಲದಿದ್ರೆ, ಪದೇ ಪದೇ ಈ ರೀತಿಯ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ ಹುಷಾರು ಎಂದು ಎಚ್ಚರಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa