ಬೆಂಗಳೂರು, 12 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರವು ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಬದಲಾಗಿ 'ಬಿರಿಯಾನಿ ಬೆಂಗಳೂರು' ಮಾಡಲು ಹೊರಟಿದೆ ಎಂದು ಬಿಜೆಪಿ ಶಾಸಕ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಬೆಂಗಳೂರಿನ ಬೀದಿನಾಯಿಗಳಿಗೆ ವರ್ಷಕ್ಕೆ 2.80 ಕೋಟಿ ಖರ್ಚು ಮಾಡಿ, ಚಿಕನ್ ಬಿರಿಯಾನಿ ಕೊಡುವ ಔಚಿತ್ಯ ಏನು ಎಂದು ಪ್ರಶ್ನಿಸಿದ್ದಾರೆ. ಯಾರು ಯೋಜನೆ ನಿರೂಪಿಸಿದ್ದಾರೆ?. ಬಿಬಿಎಂಪಿ ಆಯುಕ್ತರು ಮತ್ತು ಬೆಂಗಳೂರು ಉಸ್ತುವಾರಿ ಸಚಿವರು ಸ್ಪಷ್ಟನೆ ಕೊಡಬೇಕೆಂದು ಆಗ್ರಹಿಸಿದ್ದಾರೆ.
ನಾಯಿಗಳಿಗೆ ಆಹಾರ ಹಾಕುವುದಕ್ಕೆ ನಮ್ಮ ತಕರಾರಿಲ್ಲ. ಬೆಂಗಳೂರಿನ ಬೀದಿನಾಯಿಗಳಿಗೆ ಹಲವಾರು ವರ್ಷಗಳಿಂದ ಎನ್‍ಜಿಒಗಳು, ದಾನಿಗಳು, ಮನೆಯವರು, ಹೋಟೆಲ್ ಮಾಲೀಕರು ಆಹಾರ ನೀಡುತ್ತಿದ್ದರು. ಆದರೆ, ದುಡ್ಡು ಹೊಡೆಯಲು ಹಾಗೂ ಜನರ ತೆರಿಗೆ ಹಣವನ್ನು ಪೋಲು ಮಾಡುವ ರೀತಿಯಲ್ಲಿ ಯೋಜನೆ ಇದ್ದು, ಇದರ ಹಿಂದಿನ ಮರ್ಮ ಏನು? ಇದಕ್ಕೆ ಯಾರು ಸಹಕಾರ ಕೊಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa