ವಿಜಯಪುರ, 12 ಜುಲೈ (ಹಿ.ಸ.) :
ಆ್ಯಂಕರ್ : ತಮ್ಮ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕಳೆದ ಐದು ದಿನಗಳಿಂದ ಮಹಾನಗರ ಪಾಲಿಕೆ ನೌಕರರು ಪ್ರತಿಭಟನೆ ನಡೆಸುತ್ತಿವೆ. ಕರ್ನಾಟಕ ರಾಜ್ಯ ಮಹಾನಗರ ಪಾಲಿಕ ನೌಕರರ ಸಂಘಗಳ ಪರಿಷತ್ತು ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ನಡೆಯುತ್ತಿರುವ ವಿಜಯಪುರ ಮಹಾನಗರ ಪಾಲಿಕೆ ಆವರಣದಲ್ಲಿ ನಡೆಸಲಾಗುತ್ತಿರುವ ಪ್ರತಿಭಟನೆಯಲ್ಲಿ
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪಾಲ್ಗೊಂಡು ನೈತಿಕ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ವತಿಯಿಂದ ಶಾಸಕ ಯತ್ನಾಳರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ ರಾಜ್ಯ ಸರ್ಕಾರ ಕೂಡಲೇ ಪಾಲಿಕೆ ನೌಕರರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಮಹಾನಗರ ಪಾಲಿಕೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಯದು ದಿನಗಳಿಂದ ಮುಷ್ಕರ ನಡೆಸುತ್ತಿದ್ದರೂ ಸರ್ಕಾರ ಮಾತ್ರ ಸ್ಪಂದಿಸುವ ಕಾರ್ಯ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಇನ್ನೂ ಸಿಎಂ ಸಿದ್ದರಾಮಯ್ಯ ತಮ್ಮ ಖುರ್ಚಿ ಉಳಿಸಿಕೊಳ್ಳಲು ದೆಹಲಿಗೆ ಓಡಾಡುತ್ತಿದ್ದಾರೆ. ಪಾಲಿಕೆ ನೌಕರರ ಕಷ್ಟ ಕೇಳುತ್ತಿಲ್ಲಾ ಎಂದರು. ನೂರಕ್ಕೆ ನೂರರಷ್ಟು ನಿಮ್ಮ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡುವೆ ಎಂದರು. ಜನ ನನ್ನ ಹಿಂದೆ ಇದ್ದಾರೆ, ಪಕ್ಷ ಉಚ್ಚಾಟಿಸಿದರೂ ಏನು ಆಗಲ್ಲಾ ಎಂದು ವಾಗ್ದಾಳಿ ನಡೆಸಿದರು. ಇನ್ನೂ ನಾನು ಸಿಎಂ ಆದರೆ ಬಹಳಷ್ಟು ಜೆಸಿಬಿ ಆಪರೇಟರ್ ಬೇಕಾಗುತ್ತದೆ. ಪ್ರತಿ ಪಾಲಿಕೆಗೆ 200 ಜೆಸಿಬಿ ಆಪರೇಟರ್ ಗಳನ್ನು ನೇಮಿಸಿಕೊಂಡು ಖಾಯಂ ಮಾಡುವೆ ಎಂದರು. ಈ ಸಂದರ್ಭದಲ್ಲಿ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande