ವಿಜಯಪುರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಳ
ವಿಜಯಪುರ, 12 ಜುಲೈ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಆತಂಕದಲ್ಲೇ ವಿದ್ಯಾರ್ಥಿಗಳು ಶಾಲೆಗೆ ತೆರಳುತ್ತಿದ್ದಾರೆ. ಸರ್ಕಾರಿ ಶಾಲೆಯ ಹಾಗೂ ಅಂಗನವಾಡಿ ವಿದ್ಯಾರ್ಥಿಗಳಿಗೆ ಬೀದಿ‌ ನಾಯಿಗಳ ಕಾಟ ಹೆಚ್ಚಾಗಿದೆ. ಪ್ರತಿದಿನವೂ ಶಾಲೆಗೆ ಹೋಗುವಾಗ ಬೀದಿ ನಾಯಿಗಳ ಕಾಟದ
ನಾಯಿಗಳು


ವಿಜಯಪುರ, 12 ಜುಲೈ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಆತಂಕದಲ್ಲೇ ವಿದ್ಯಾರ್ಥಿಗಳು ಶಾಲೆಗೆ ತೆರಳುತ್ತಿದ್ದಾರೆ. ಸರ್ಕಾರಿ ಶಾಲೆಯ ಹಾಗೂ ಅಂಗನವಾಡಿ ವಿದ್ಯಾರ್ಥಿಗಳಿಗೆ ಬೀದಿ‌ ನಾಯಿಗಳ ಕಾಟ ಹೆಚ್ಚಾಗಿದೆ.

ಪ್ರತಿದಿನವೂ ಶಾಲೆಗೆ ಹೋಗುವಾಗ ಬೀದಿ ನಾಯಿಗಳ ಕಾಟದಿಂದ ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕವಾಗಿದೆ.

ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲದೆ ಶಿಕ್ಷಕರು, ಅಡುಗೆ ಸಿಬ್ಬಂದಿಗೂ ಆತಂಕ ವಿಜಯಪುರ ನಗರದ ಗ್ಯಾಂಗ್ ಬೌಡಿ ಪ್ರದೇಶದ ಶಾಲೆ 32 ರ ವಿದ್ಯಾರ್ಥಿಗಳಿಗೆ ನಿತ್ಯ ತಪ್ಪದ ಆತಂಕವಾಗಿದೆ.

ವಾರ್ಡ್ ನಂ.3 ರ ಭಾವಸಾರ ನಗರದಲ್ಲಿ ಬೀದಿ ನಾಯಿಗಳು ಹಾವಳಿ ಇದ್ದು, ಮನೆಯ ಮುಂದೆ ನಿಲ್ಲಿಸಿದ ವಾಹನಗಳ ಸೀಟು‌ ಹರಿದು ಹಾಕಿವೆ ಬೀದಿ ನಾಯಿಗಳು. ಬೀದಿ ನಾಯಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಸ್ಥಳೀಯರ ಮಹಾನಗರ ಪಾಲಿಕೆಗೆ ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande