4ನೇ ಅತಿದೊಡ್ಡ ಆರ್ಥಿಕತೆ ಹೊಂದಿದ ರಾಷ್ಟ್ರ ಭಾರತ : ಪ್ರಹ್ಲಾದ ಜೋಶಿ
ಹುಬ್ಬಳ್ಳಿ, 12 ಜುಲೈ (ಹಿ.ಸ.) : ಆ್ಯಂಕರ್ : ರೋಜಗಾರ ಮೇಳದ ಮೂಲಕ 10 ವರ್ಷದಲ್ಲಿ 10 ಲಕ್ಷ ಉದ್ಯೋಗ ನೀಡುವ ಗುರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೊಂದಿದ್ದರು. ಅದರಂತೆ ರೋಜಗಾರ ಮೇಳದಲ್ಲಿ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ವಿತರಣೆ ಮಾಡಲಾಗುತ್ತಿದೆ. ಇಪಿಎಫ್
Joshi


ಹುಬ್ಬಳ್ಳಿ, 12 ಜುಲೈ (ಹಿ.ಸ.) :

ಆ್ಯಂಕರ್ : ರೋಜಗಾರ ಮೇಳದ ಮೂಲಕ 10 ವರ್ಷದಲ್ಲಿ 10 ಲಕ್ಷ ಉದ್ಯೋಗ ನೀಡುವ ಗುರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೊಂದಿದ್ದರು. ಅದರಂತೆ ರೋಜಗಾರ ಮೇಳದಲ್ಲಿ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ವಿತರಣೆ ಮಾಡಲಾಗುತ್ತಿದೆ. ಇಪಿಎಫ್‌ಒನಲ್ಲಿ 23.73 ಕೋಟಿ ಹೊಸ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ಕೇಶ್ವಾಪುರದ ಆಫೀಸರ್ಸ್ ಕ್ಲಬ್ ನಲ್ಲಿ ನೈರುತ್ಯ ರೈಲ್ವೆ ಸಹಯೋಗದಲ್ಲಿ ಆಯೋಜಿಸಿದ್ದ ರೋಜಗಾರ್ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಸೇರಿದಂತೆ ವಿವಿಧ ವಲಯಗಳಲ್ಲಿ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ರೋಜಗಾರ್ ಮೇಳ ಕಾರ್ಯಕ್ರಮಗಳ ಮೂಲಕ ವಿತರಿಸಲಾಗುತ್ತಿದೆ. ಅದರಂತೆ ಸುಮಾರು 7.72 ಲಕ್ಷ ಉದ್ಯೋಗ ಪತ್ರಗಳನ್ನು ಅಭ್ಯರ್ಥಿಗಳಿಗೆ ನೀಡಲಾಗಿರುತ್ತದೆ. ಅಲ್ಲದೇ ಹೊಸ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು. ಆ ಮೂಲಕ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲಾಗುವುದು ಎಂದು ಅವರು ತಿಳಿಸಿದರು.

ಭಾರತ ದೇಶ ಯುವ ರಾಷ್ಟ್ರವಾಗಿದೆ. ದೇಶದಲ್ಲಿ ಯುವ ಸಮುದಾಯದ ಸಂಖ್ಯೆ ಹೆಚ್ಚಳವಾಗಿದೆ. ಅಲ್ಲದೇ ಸುಮಾರು 140 ಕೋಟಿ ಜನಸಂಖ್ಯೆಯನ್ನು ಭಾರತ ದೇಶ ಹೊಂದಿದೆ. ಆ ಮೂಲಕ ವಿಶ್ವದಲ್ಲೇ ಹೆಚ್ಚು ಜನಸಂಖ್ಯೆಯನ್ನು ಹೊಂದಿದ ರಾಷ್ಟ್ರ ಭಾರತವಾಗಿದೆ. ಹೊಸ ಉದ್ಯೋಗಗಳಿಂದ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಲಿವೆ. ಇದರಿಂದ ದೇಶದ ಆರ್ಥಿಕತೆ ಬೆಳವಣಿಗೆಯಾಗಲಿದೆ. ಭಾರತ ದೇಶ 4ನೇ ಅತಿದೊಡ್ಡ ಆರ್ಥಿಕತೆ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದರು.

ಕಳೆದ 10 ವರ್ಷದಲ್ಲಿ ಸುಮಾರು 40 ಸಾವಿರ ಕಿ.ಮೀ. ರೈಲ್ವೆ ವಿದ್ಯುದ್ಧೀಕರಣ ಮಾಡಲಾಗಿದೆ. 10 ವರ್ಷಗಳ ಹಿಂದೆ ಸುಮಾರು 23 ಸಾವಿರ ಕಿ.ಮೀ. ವಿದ್ಯುದ್ಧೀಕರಣ ಮಾಡಲಾಗಿತ್ತು. ದೇಶದ ಸುಮಾರು 80 ಕೋಟಿ ಜನರಿಗೆ ಉಚಿತ ಪಡಿತರವನ್ನು ವಿತರಿಸಲಾಗುತ್ತಿದೆ. ವಿದ್ಯುತ್ ಉತ್ಪಾದನೆಯನ್ನು ಸ್ವಾವಲಂಬನೆಯನ್ನು ಸಾಧಿಸಲಾಗಿದೆ. ರಾಷ್ಟ್ರದಲ್ಲಿ ಮೂಲಸೌಕರ್ಯ ಸುಧಾರಣೆಯಾಗಿದೆ. ಮಹಿಳೆಯರು ಸಹ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತೀಯ ವಾಯು ಸೇನೆಯಲ್ಲಿ ಮಹಿಳಾ ಪೈಲೇಟ್‌ಗಳು ವಿಮಾನವನ್ನು ಚಲಾಯಿಸುತ್ತಿದ್ದಾರೆ. ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳು ಜನರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಒಳ್ಳೆಯ ಕೆಲಸಕ್ಕೆ ಆದ್ಯತೆ ನೀಡಬೇಕು ಎಂದು ಅವರು ಹಾರೈಸಿದರು.

ಇದೇ ಸಂದರ್ಭದಲ್ಲಿ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಾದ ಮುಖುಲ್ ಶರಣ ಮಾಥುರ್, ಡಿಆರ್‌ಎಂ ಬೀಲಾ ಮೀನಾ, ಪಿಸಿಪಿಒ ಸೂರ್ಯ ಪ್ರಕಾಶ ಸೇರಿದಂತೆ ರೈಲ್ವೆ ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande