ರಾಜ್ಯ ಕಾಂಗ್ರೆಸ್ ಸರ್ಕಾರ ಸತ್ತಿದೆ : ಶಾಸಕ ಯತ್ನಾಳ ಹೇಳಿಕೆ
ವಿಜಯಪುರ, 12 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರ ಸತ್ತಿದೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ರಾಜ್ಯದಲ್ಲಿ ಬಹಳಷ್ಟು ಸಮಸ್ಯೆ ಇವೆ. ಆದರೆ, ಕಾಂಗ್ರೆಸ್‌ನವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎಂದು ಲೇವಡಿ ಮಾಡಿದರು. ಇನ್ನು ನಾನೇ ಮುಖ್ಯಮಂತ್ರಿ
ಶಾಸಕ ಯತ್ನಾಳ


ವಿಜಯಪುರ, 12 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರ ಸತ್ತಿದೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ರಾಜ್ಯದಲ್ಲಿ ಬಹಳಷ್ಟು ಸಮಸ್ಯೆ ಇವೆ. ಆದರೆ, ಕಾಂಗ್ರೆಸ್‌ನವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎಂದು ಲೇವಡಿ ಮಾಡಿದರು.

ಇನ್ನು ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯತ್ನಾಳ, ನಿಮ್ಮ ಕುರ್ಚಿ ಗಟ್ಟಿ ಇದ್ದರೆ ದೆಹಲಿಗೆ ಹೋಗ್ತಾ ಇರಲಿಲ್ಲ. ವಿಧಾನ ಸೌಧದಲ್ಲಿ ಕುಳಿತು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.

ದೆಹಲಿಯಲ್ಲಿ ಕುಳಿತಿರಿ ಎಂದರೆ ನಿಮ್ಮ ಕುರ್ಚಿ ಅಲುಗಾಡುತ್ತಿದೆ. ನಿಮಗೆ ಏನೋ ಭಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಯತ್ನಾಳ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande