ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕುರಿತು ಸಚಿವರ ಸಭೆ
ತುಮಕೂರು, 12 ಜುಲೈ (ಹಿ.ಸ.) : ಆ್ಯಂಕರ್ : ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿಗೆ ತುಂಗಭದ್ರ ಜಲಾಶಯದ ಹಿನ್ನೀರಿನಿಂದ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆಯ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್
Meeting


ತುಮಕೂರು, 12 ಜುಲೈ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿಗೆ ತುಂಗಭದ್ರ ಜಲಾಶಯದ ಹಿನ್ನೀರಿನಿಂದ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆಯ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದ ಕುರಿತು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದರು.

ಜುಲೈ ೨೧ರಂದು ಜಿಲ್ಲೆಯ ಕಾಮಗಾರಿಗಳಿಗೆ ಚಾಲನೆ ದೊರೆಯಲಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದರು.

ಸಭೆಯಲ್ಲಿ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್, ಅಪರ ಜಿಲ್ಲಾಧಿಕಾರಿ ಡಾ. ತಿಪ್ಪೆಸ್ವಾಮಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande