ಜುಲೈ 2ನೇ ವಾರ : ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ
ರಾಯಚೂರು, 12 ಜುಲೈ (ಹಿ.ಸ.) : ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವ ಎಲ್ಲಾ ವರ್ಗದ ಪುರುಷರು ಗೂ ಮತ್ತು ಮಹಿಳೆಯರುಗಳಿಗೆ 1 ದ
ಜುಲೈ 2ನೇ ವಾರ : ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ


ರಾಯಚೂರು, 12 ಜುಲೈ (ಹಿ.ಸ.) :

ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವ ಎಲ್ಲಾ ವರ್ಗದ ಪುರುಷರು ಗೂ ಮತ್ತು ಮಹಿಳೆಯರುಗಳಿಗೆ 1 ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಕಾರ್ಯಕ್ರಮವನ್ನು ರಾಯಚೂರಿನಲ್ಲಿ 2025 ಜುಲೈ 2ನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸ್ವಂತ ಉದ್ಯೋಗ ಸ್ಥಾಪಿಸಲು ಸರ್ಕಾರದ ಯೋಜನೆಗಳು, ಬ್ಯಾಂಕಿನ ವ್ಯವಹಾರ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು, ಇದಕ್ಕಾಗಿ ರಾಯಚೂರು ಜಿಲ್ಲೆಯ ಆಸಕ್ತ ಎಲ್ಲಾ ವರ್ಗದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಕನಿಷ್ಟ 8 ನೇ ತರಗತಿ ಪಾಸಾಗಿರಬೇಕು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿರುವವರು ಜುಲೈ 15ರೊಳಗಾಗಿ ಮೊಬೈಲ್ ಸಂಖ್ಯೆ: 9986600631, 8073789886 ಗೆ ಸಂಪರ್ಕಿಸಿ ತಮ್ಮ ಹೆಸರಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande