ರಾಯಚೂರು, 12 ಜುಲೈ (ಹಿ.ಸ.) :
ಆ್ಯಂಕರ್ : ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪ ಘಟಕವಾದ ಎ.ಎಚ್.ಪಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2,419 ಗುಂಪು ಮನೆಗಳು ಜಿ+3 ಮಾದರಿಯಲ್ಲಿ ನಿರ್ಮಾಣವಾಗುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ವಸತಿ ಮತ್ತು ನಿವೇಶನ ರಹಿತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ವರ್ಗದವರಿಗೆ-1,053 ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ-951 ಒಟ್ಟು 2,004 ಮನೆಗಳ ಗುರಿ ನಿಗದಿಯಾಗಿದ್ದು, ಇದುವರೆಗೂ ಪರಿಶಿಷ್ಟ ಜಾತಿ ವರ್ಗದವರಿಂದ-194 ಹಾಗೂ ಪರಿಶಿಷ್ಟ ಪಂಗಡ ವರ್ಗದವರಿಂದ-37 ಒಟ್ಟು 231 ಅರ್ಜಿಗಳು ಮಾತ್ರ ಕಚೇರಿಗೆ ಸ್ವೀಕೃತವಾಗಿರುತ್ತವೆ. ನಿಗದಿಪಡಿಸಿದ ಗುರಿಗಿಂತಲೂ ಅತಿ ಕಡಿಮೆ ಅರ್ಜಿಗಳು ಸ್ವೀಕೃತವಾಗಿದ್ದರಿಂದ ಬಾಕಿ ಪರಿಶಿಷ್ಟ ಜಾತಿ ವರ್ಗದ-757 ಅರ್ಜಿಗಳು ಹಾಗೂ ಪರಿಶಿಷ್ಟ ಪಂಗಡ ವರ್ಗದ-1,016 ಅರ್ಜಿಗಳು ಒಟ್ಟು 1,773 ವಸತಿ ಮತ್ತು ನಿವೇಶನ ರಹಿತ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ದಾಖಲೆಗಳು: ನಿಗದಿತ ನಮೂನೆ (4ಬಿ), ಆಧಾರ್ ಕಾರ್ಡ್ (ಮನೆಯ ಯಜಮಾನ/ನಿ ಹಾಗೂ ತಂದೆ / ತಾಯಿ ಮತ್ತು ಪಡಿತರ ಚೀಟಿಯಲ್ಲಿ ಇರುವಂತ ಕುಟುಂಬ ಸದಸ್ಯರ ಆಧಾರ್ ಕಾಡ್ರ್ಗಳು.), ಆದಾಯ ಮತ್ತು ಜಾತಿ ಪ್ರಮಾಣ ಪತ್ರ. (ವಾರ್ಷಿಕ ಆದಾಯ ಕನಿಷ್ಟ 1.20 ಲಕ್ಷ), ಪಡಿತರ ಚೀಟಿ, ಬ್ಯಾಂಕ್ ಖಾತೆಯ ವಿವರ, ಪ್ಯಾನ್ ಕಾರ್ಡ್, ವಾಸಸ್ಥಳ ಪ್ರಮಾಣ ಪತ್ರ, ಅರ್ಜಿದಾರರು ಅವರ ಹೆಸರಿನಲ್ಲಿ ಅಥವಾ ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ ಯಾವುದೇ ಪಕ್ಕಾ ಮನೆ ಹೊಂದಿರುವುದಿಲ್ಲ. ಎಂಬುದರ ಕುರಿತು ರೂ.20/ರ ಛಾಪಾ ಕಾಗದದಲ್ಲಿ ಪ್ರಮಾಣ ಪತ್ರ ನೀಡಬೇಕು.
ಅರ್ಹತೆ: ಕಡ್ಡಾಯವಾಗಿ ಪ.ಜಾತಿ ಮತ್ತು ಪ.ಪಂಗಡ ವರ್ಗದವರಾಗಿರಬೇಕು, ರಾಯಚೂರು ನಗರ ನಿವಾಸಿಗಳಾಗಿರಬೇಕು, ಫಲಾನುಭವಿಯು ವಿವಾಹಿತ ಮಹಿಳೆ ಅಥವಾ ಏಕ ಮಹಿಳಾ ಒಡೆತನದ ಗೃಹಿಣಿಯಾಗಿರಬೇಕು. ಇವರನ್ನು ಹೊರತುಪಡಿಸಿ ಪುರುಷರಾಗಿದ್ದಲ್ಲಿ ಮಾಜಿ ಯೋಧರು, ವಿಧುರರು, ಅಂಗವಿಕಲರು, ಹಿರಿಯ ನಾಗರಿಕರು ವಿಚ್ಛೇದಿತರು ಜುಲೈ 31ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಯನ್ನು ಕಚೇರಿಯ ಸಮಯದಲ್ಲಿ ಆಶ್ರಯ ವಿಭಾಗಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್