ರಾಯಚೂರು, 12 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಈಗ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ವರ್ಗಾವಣೆಯಾದ ರಾಹುಲ್ ತುಕಾರಾಂ ಪಾಂಡ್ವೆ ಅವರಿಗೆ ಬೀಳ್ಕೊಡುಗೆ ಹಾಗೂ ರಾಯಚೂರು ಜಿ.ಪಂಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ನಿಯುಕ್ತಿಗೊಂಡ ಈಶ್ವರ ಕುಮಾರ ಕಾಂದೂ ಅವರಿಗೆ ಸ್ವಾಗತ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಈ ವೇಳೆ ನಿರ್ಗಮಿತ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ ಅವರು ಮಾತನಾಡಿ, ನಾನು ಸುಮಾರು 23 ತಿಂಗಳುಗಳ ಕಾಲ ಈ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ ನನಗೆ ಉತ್ತಮ ಅನುಭವ ಮತ್ತು ಜಿಲ್ಲೆಯ ಇಲಾಖೆಯ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಾರೆ. ಆದರೆ ಅದರ ಸಂಪೂರ್ಣ ಮಾಹಿತಿ ನೀಡುವಲ್ಲಿ ವಿಫಲರಾಗುತ್ತಿದ್ದಾರೆ. ಅದು ಸ್ವಲ್ಪ ಅಬಿವೃದ್ದಿ ಪಡಿಸಿಕೊಳ್ಳಬೇಕು ಎಂದರು.
ಎಲ್ಲಾ ಇಲಾಖೆಯ ಅಧಿಕಾರಿಗಳು ಹೆಚ್ಚೆತ್ತುಕೊಂಡು ಕೆಲಸ ಮಾಡಿದರೆ ಜಿಲ್ಲೆಯ ಅಭಿವೃದ್ಧಿ ಸಾಧ್ಯವೆಂದು ಹೇಳಿದರು.
ಕೃಷಿ ಇಲಾಖೆ ಮತ್ತು ಇಲಾಖೆಗಳು ಸಹ ಒಳ್ಳೆಯ ಕೆಲಸವನ್ನು ಮಾಡುತ್ತಿದೆ ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ರಾಯಚೂರು ಜಿಲ್ಲೆಯು ತುಂಬಾ ಒಳ್ಳೆಯ ಜಿಲ್ಲೆ ಹಾಗೂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಒಡನಾಟವನ್ನು ಹಂಚಿಕೊಂಡರು.
ಈ ವೇಳೆ ನೂತನ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಅವರು ಮಾತನಾಡಿ, ರಾಯಚೂರಿನ ಜಿ.ಪಂನ ಸಿಇಒಗಳ ಸೇವೆಯನ್ನು ನೋಡಿದಾಗ 2 ವರ್ಷ ಸೇವೆಯನ್ನು ಪೂರ್ತಿಮಾಡಿದ ಹೆಗ್ಗಳಿಕೆ ರಾಹುಲ್ ತುಕಾರಾಂ ಅವರಿಗೆ ಸಲ್ಲುತ್ತದೆ. ಅವರು ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳ ಕಾರ್ಯಕ್ಷಮತೆಯಲ್ಲಿ ತುಂಬಾ ಸಹಕಾರ ನೀಡಿರುವುದು ತಿಳಿಯುತ್ತಿದೆ.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ ಅವರು ಮಾತನಾಡಿ, ಜಿಲ್ಲಾ ಕೇಂದ್ರದ ನಿರ್ವಹಣೆಯಲ್ಲಿ ಡಿಸಿ, ಎಸ್ಪಿ, ಹಾಗೂ ಸಿಇಓ ಈ ಮೂರು ಹುದ್ದೆಗಳು ಅತ್ಯಂತ ಮುಖ್ಯವಾದವು ಪಾಂಡ್ವೆ ಅವರು ಈ ಮೂರು ಪೈಕಿ ಒಂದಾದ ಮುಖ್ಯ ಕಾರ್ಯನಿರ್ವಾಹಕರ ಹುದ್ದೆಯನ್ನು ಅತ್ಯಂತ ಸಮರ್ಪಕವಾಗಿ ನಿಭಾಯಿಸಿದರು. ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದು ನನಗೆ ಗೌರವವಾಗಿತ್ತು.
ಸಿಬ್ಬಂದಿಗಳ ಮೇಲಿನ ಕ್ರಮಕೈಗೊಳ್ಳುವ ಸಂದರ್ಭದಲ್ಲಿ ಅವರು ನೀಡುತ್ತಿದ್ದ ಸೂಕ್ಷ್ಮ ಸಲಹೆಗಳು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಲು ಹಾದಿಯಾಗಿದ್ದವು ಎಂದು ತಿಳಿಸಿದರು.
ಅವರ ನಿರ್ವಹಣಾ ಶೈಲಿ ಶಿಸ್ತಿನ ಜೊತೆ ಮನುಷ್ಯತ್ವವನ್ನೂ ಒಳಗೊಂಡಿತ್ತು. ಅವರು ಅಧಿಕಾರಿಯಾಗಿದ್ದ ಅಲ್ಲದೇ ತಮ್ಮ ಸರಳತೆಯಿಂದ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಬಂದರೂ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ತಮ್ಮದೇ ಜ್ಞಾನದಿಂದ ಸಲಹೆಗಳನ್ನು ನೀಡುತ್ತಿದ್ದರು. ಅವರ ಮುಂದಿನ ಹುದ್ದೆಯಲ್ಲಿ ಅವರು ಇನ್ನೂ ಹೆಚ್ಚಿನ ಜನರಿಗೆ ಉತ್ತಮ ಸೇವೆ ನೀಡಲಿ ಎಂದರು.
ಈ ವೇಳೆ ಸಹಾಯಕ ಆಯುಕ್ತ ಗಜಾನನ ಬಾಲೆ ಅವರು ಮಾತನಾಡಿ, ಪಾಂಡ್ವೆ ಅವರು ಜೆಸ್ಕಾಂ ಎಂಡಿಯಾಗಿ ಕಲಬುರ್ಗಿಯಲ್ಲಿ ಸೇವೆ ಸಲ್ಲಿಸಿದ ಸಂದರ್ಭದಲ್ಲಿ ಅವರೊಂದಿಗೆ ನಾನು ಕೆಲಸ ಮಾಡಿದ್ದೇನೆ. ಅವರು ಈಗ ಶಿಕ್ಷಣ ಇಲಾಖೆಯ ಆಯುಕ್ತರಾಗಿರುವುದು ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಯೋಜನಾ ನಿರ್ದೇಶಕ ಶರಣಬಸವರಾಜ, ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್