ರಾಯಚೂರು, 12 ಜುಲೈ (ಹಿ.ಸ.)
ಆ್ಯಂಕರ್: ರಾಜ್ಯ ಸರ್ಕಾರದ ಜನಪರ ಮತ್ತು ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದ್ದು, ಈ ಯೋಜನೆಗಳ ಪೈಕಿ ಶಕ್ತಿ ಯೋಜನೆಯಡಿ ಫಲಾನುಭವಿಗಳ ಸಂಖ್ಯೆ 500 ಕೋಟಿ ಟ್ರಿಪ್‌ಗಳ ಗಡಿ ದಾಟ್ಟುವ ಮೂಲಕ ಹೆಣ್ಣು ಮಕ್ಕಳಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಯೋಜನೆಯನ್ನು ಪ್ರಥಮ ಬಾರಿಗೆ 2023ರ ಜೂನ್ 11ರಂದು ಜಾರಿಗೊಳಿಸಲಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಉಚಿತವಾಗಿ ರಾಜ್ಯದ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಅಂಗತ್ವಾಲ್ಪಸ0ಖ್ಯಾತರು ಸೇರಿದಂತೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿಸಲಾಗಿದೆ.
ಹೆಣ್ಣು ಮಕ್ಕಳು ಸರ್ಕಾರಿ ಸೌಮ್ಯದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಹೆಗ್ಗಳಿಕೆಯನ್ನು ಸಾಂಕೇತಿಕವಾಗಿ ಜುಲೈ 14ರ ಸೋಮವಾರ ರಂದು ಸನ್ಮಾನ್ಯ ಮುಖ್ಯ ಮಂತ್ರಿಗಳು ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಸಮಿತಿಯ ಸದಸ್ಯರುಗಳು ಈ ಸುಸಂದರ್ಭದವನ್ನು ಕಲಬುರಗಿ ವಲಯದ ಎಲ್ಲಾ ಜಿಲ್ಲೆಗಳಲ್ಲಿ ಪೂಜೆಯನ್ನು ಸಲ್ಲಿಸಿ, ಪ್ರಯಾಣಿಕರಿಗೆ ಸಸಿ ವಿತರಿಸುವ ಮೂಲಕ ಆರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ರಾಯಚೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ರಾಯಚೂರು, ಲಿಂಗಸುಗೂರು, ಸಿಂಧನೂರು, ಮಾನವಿ, ದೇವದುರ್ಗ, ಮಸ್ತಿ, ಅರಕೇರಾ, ಸಿರವಾರ ಬಸ್ ನಿಲ್ದಾಣಗಳಲ್ಲಿ ಜುಲೈ 14ರ ಸೋಮವಾರ ಬೆಳಿಗ್ಗೆ 11:30 ಗಂಟೆಗೆ ಈ ಸಮಾರಂಭದ ಪೂಜೆಯನ್ನು ಆಯೋಜಿಸಲಾಗಿದೆ.
ಈ ಸಮಾರಂಭದಲ್ಲಿ ಕೇಂದ್ರ ಬಸ್ ನಿಲ್ದಾಣ ರಾಯಚೂರುನಲ್ಲಿ ಗ್ಯಾರಂಟಿ ಯೋಜನೆಗಳ ಮಾನ್ಯ ಜಿಲ್ಲಾಧ್ಯಕ್ಷರು, ಜಿಲ್ಲಾ ಉಪಾಧ್ಯಕ್ಷರು. ಸದಸ್ಯರು ಮತ್ತು ತಾಲೂಕು ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಭಾಗವಹಿಸಲಿದ್ದು, ಹಾಗೂ ತಾಲೂಕುವಾರು ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರು, ಉಪಾಧ್ಯಕ್ಷರು. ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ ಎಲ್.ಎಮ್ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್