ನವದೆಹಲಿ, 13 ಜುಲೈ (ಹಿ.ಸ.) :
ಆ್ಯಂಕರ್ : ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಇಂದಿನಿಂದ ಮೂರು ದಿನಗಳ ಸಿಂಗಾಪುರ ಮತ್ತು ಚೀನಾ ಭೇಟಿಗೆ ನೀಡಲಿದ್ದಾರೆ. 2020ರ ಲಡಾಖ್ ಗಡಿಬಿಕ್ಕಟ್ಟಿನ ಬಳಿಕ ಇದೇ ಮೊದಲ ಬಾರಿಗೆ ಅವರು ಚೀನಾಕ್ಕೆ ಭೇಟಿ ನೀಡುತ್ತಿದ್ದಾರೆ.
ಭಾನುವಾರ ಅವರು ಸಿಂಗಾಪುರದಲ್ಲಿನ ದ್ವಿಪಕ್ಷೀಯ ಸಭೆಗಳಲ್ಲಿ ಭಾಗವಹಿಸಲಿದ್ದು, ಜುಲೈ 14-15 ರಂದು ಚೀನಾದ ಟಿಯಾಂಜಿನ್‌ನಲ್ಲಿ ನಡೆಯುವ ಎಸ್‌ಸಿಒ (ಶಾಂಘೈ ಸಹಕಾರ ಸಂಸ್ಥೆ) ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೃಹತ್ ವಾಣಿಜ್ಯ ಸಹಕಾರ, ಅಪರೂಪದ ಲೋಹಗಳ ಉತ್ಪಾದನೆ ಮತ್ತು ಪ್ರಾದೇಶಿಕ ಸ್ಥಿರತೆ ಕುರಿತು ಚರ್ಚೆಯಾಗುವ ನಿರೀಕ್ಷೆಯಿದೆ.
ಬೀಜಿಂಗ್‌ನಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿಯವರೊಂದಿಗೆ ಜೈಶಂಕರ್ ಅವರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಸಭೆ ಭಾರತದ ಗಡಿಯಲ್ಲಿ ಶಾಂತಿ ಸ್ಥಾಪನೆ ಮತ್ತು ಸಂಬಂಧ ಸುಧಾರಣೆಗೆ ಹೆಜ್ಜೆಯಾಗಿದೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa