ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ; ನಾಲ್ವರ ಸಾವು
ರಾಮನಗರ, 13 ಜುಲೈ (ಹಿ.ಸ.) : ಆ್ಯಂಕರ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಜಯಪುರ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸ್ಥಳದಲ್
Accident


ರಾಮನಗರ, 13 ಜುಲೈ (ಹಿ.ಸ.) :

ಆ್ಯಂಕರ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯ ಜಯಪುರ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತರು ಮಂಡ್ಯ ಜಿಲ್ಲೆಯ ಕೆ.ಆರ್​.ಪೇಟೆಯವರಾಗಿದ್ದು . ಮೃತರನ್ನು ಮುತ್ತುರಾಜು (55), ತಮ್ಮನಗೌಡ (27), ಸಂಜು (28) ಹಾಗೂ ಕಾರು ಚಾಲಕ‌ ಸಚಿನ್‌ (27) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ನಿದ್ದೆ ಮಂಪರಿನಲ್ಲಿದ್ದ ಚಾಲಕ ನಿಯಂತ್ರಣ ಕಳೆದುಕೊಂಡು ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಶಂಕಿಸಲಾಗಿದ್ದು. ರಾಮನಗರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande