ಬೆಂಗಳೂರು, 13 ಜುಲೈ (ಹಿ.ಸ.) :
ಆ್ಯಂಕರ್ : ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು.
ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀಲವಾಗಿದ್ದವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್