ಸಿಗಂದೂರು ಸೇತುವೆ ಉದ್ಘಾಟನೆ ಮುಂದೂಡಲು ನಿತಿನ್ ಗಡ್ಕರಿಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು, 13 ಜುಲೈ (ಹಿ.ಸ.) : ಆ್ಯಂಕರ್ : ಸಿಗಂದೂರು ಸೇತುವೆ ಉದ್ಘಾಟನೆ ಮುಂದೂಡಲು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪತ್ರದ ಸಾರಾಂಶ ಇಲ್ಲಿದೆ.... ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ನೆಹರು ಮೈದಾನದಲ್ಲಿ 2025ರ ಜುಲೈ 14 ರಂ
Letter

ಬೆಂಗಳೂರು, 13 ಜುಲೈ (ಹಿ.ಸ.) :

ಆ್ಯಂಕರ್ : ಸಿಗಂದೂರು ಸೇತುವೆ ಉದ್ಘಾಟನೆ ಮುಂದೂಡಲು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ ಇಲ್ಲಿದೆ....

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ನೆಹರು ಮೈದಾನದಲ್ಲಿ 2025ರ ಜುಲೈ 14 ರಂದು ರಾಷ್ಟ್ರ ಸಮರ್ಪಣೆ ಮತ್ತು ಶಂಕುಸ್ಥಾಪನೆ ಸಮಾರಂಭವನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆಯೋಜಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಕಾರ್ಯಕ್ರಮದ ಕರಡು ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹ ಸೇರಿಸಲಾಗಿದೆ.

ಆದಾಗ್ಯೂ, ಈ ಕಾರ್ಯಕ್ರಮದ ಕುರಿತು ನನಗೆ ಪೂರ್ವದಿಂದಲೇ ಯಾವುದೇ ಮಾಹಿತಿ ನೀಡಲಾಗಿಲ್ಲ. ಇದೇ ದಿನ ನಾನು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ನನ್ನ ಅಧ್ಯಕ್ಷತೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಗದಿದೆ.

ಇಂತಹ ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ನಿಗದಿಪಡಿಸುವ ಮೊದಲು ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿದರೆ ಸೂಕ್ತವಾಗಿತ್ತೆಂದು ನಾನು ನಂಬುತ್ತೇನೆ. ಆದ್ದರಿಂದ, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವಾಗ ರಾಜ್ಯ ಸರ್ಕಾರದೊಂದಿಗೆ ಸಹಕಾರದಲ್ಲಿ ಕೆಲಸ ಮಾಡಲು ಇಲಾಖೆಗೆ ಸೂಚನೆ ನೀಡುವಂತೆ ನಿಮ್ಮನ್ನು ವಿನಂತಿಸುತ್ತೇನೆ. ಈ ಹಿನ್ನೆಲೆಯಲ್ಲಿ, ಈ ಕಾರ್ಯಕ್ರಮವನ್ನು ಮುಂದೂಡಲು ಹಾಗೂ ನಿಮಗೆ ಅನುಕೂಲವಾಗುವ ಒಂದೆರಡು ದಿನಾಂಕಗಳನ್ನು ನನಗೆ ತಿಳಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ, ಇದರಿಂದ ನಾನು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

 rajesh pande