90 ದಿನಗಳು ದೇಶಕ್ಕಾಗಿ ಘೋಷವ್ಯಾಕದಡಿ ವಿಶೇಷ ಅಭಿಯಾನ
ರಾಯಚೂರು, 14 ಜುಲೈ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದೇಶದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮಧ್ಯಸ್ಥಿಕೆ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಕುರಿತು 90 ದಿನಗಳು ದೇಶಕ್ಕಾಗಿ ಎಂಬ ಘೋಷವ್ಯಾಕದೊಂದಿಗೆ ವಿಶೇಷ ಮಧ್ಯಸ್ಥಿಕೆಯ ಅಭಿಯಾನ ಆಯೋಜಿಸಲಾ
90 ದಿನಗಳು ದೇಶಕ್ಕಾಗಿ ಘೋಷವ್ಯಾಕದಡಿ ವಿಶೇಷ ಅಭಿಯಾನ


ರಾಯಚೂರು, 14 ಜುಲೈ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದೇಶದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮಧ್ಯಸ್ಥಿಕೆ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಕುರಿತು 90 ದಿನಗಳು ದೇಶಕ್ಕಾಗಿ ಎಂಬ ಘೋಷವ್ಯಾಕದೊಂದಿಗೆ ವಿಶೇಷ ಮಧ್ಯಸ್ಥಿಕೆಯ ಅಭಿಯಾನ ಆಯೋಜಿಸಲಾಗಿದೆ ಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್.ಎ. ಸಾತ್ವಿಕ್ ಅವರು ತಿಳಿಸಿದ್ದಾರೆ.

ಈ ಮಧ್ಯಸ್ಥಿಕೆಯ ಅಭಿಯಾನವು ರಾಯಚೂರ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸಹ ನಡೆಯಲಿದೆ. ರಾಜಿ ಆಗಬಹುದಾದ ಪ್ರಕರಣಗಳನ್ನು ಮಧ್ಯೆಸ್ಥಿಕೆ ಕೇಂದ್ರಗಳಿಗೆ ಕಳುಹಿಸಿ ಅಲ್ಲಿ ವಿಶೇಷ ತರಬೇತಿ ಹೊಂದಿದ ಮಧ್ಯೆಸ್ಥಿಕೆಗಾರರಿಂದ ರಾಜಿಸಂಧಾನ ಮಾಡಿಸುವ ವ್ಯವಸ್ಥೆ ಇದಾಗಿದೆ. ಕಕ್ಷಿದಾರರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಸಿಂಧನೂರು, ಲಿಂಗಸೂಗೂರು, ಮಾನವಿ, ದೇವದುರ್ಗ ಕಚೇರಿಗಳನ್ನು ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande