ರಾಯಚೂರು, 14 ಜುಲೈ (ಹಿ.ಸ.) :
ಆ್ಯಂಕರ್ : ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26ನೇ ಸಾಲಿನಲ್ಲಿ ಆತ್ಮ ಯೋಜನೆಯಡಿ ರಾಯಚೂರು ತಾಲೂಕಿನ ಯರಗೇರಾ ಹೋಬಳಿಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಅಭ್ಯರ್ಥಿಯು ಕೃಷಿ ವಿಜ್ಞಾನದಲ್ಲಿ ಪದವಿ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಕನಿಷ್ಠ 1 ವರ್ಷಗಳ ಅನುಭವ ಹೊಂದಿರಬೇಕು. ಅಭ್ಯರ್ಥಿಗಳು ಛಾಯಾಚಿತ್ರ ಲಗತ್ತಿಸಿದ ವೈಯಕ್ತಿಕ ಮಾಹಿತಿ, ವಿದ್ಯಾರ್ಹತೆ, ಅನುಭವ ಪ್ರಮಾಣ ಪತ್ರ, ಆಧಾರ್ ಪ್ರತಿ, ಕಂಪ್ಯೂಟರ್, ಜಾತಿ ಪ್ರಮಾಣ ಪತ್ರದ ದೃಢೀಕೃತ ಫೋಟೋ ಪ್ರತಿ ದಾಖಲಾತಿಗಳನ್ನು ಜುಲೈ 18ರ ಸಂಜೆ 4 ಗಂಟೆಯೊಳಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾ ನ್ಯಾಯಲಯ ಕಟ್ಟಡ ಬಲಗಡೆ, ಹೈದ್ರಾಬಾದ್ ರಸ್ತೆ, ರಾಯಚೂರು ಇವರ ಕಚೇರಿಗೆ ಅಂಚೆ ಮುಖಾಂತರ ಅಥವಾ ಖುದ್ದಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್