ನಟಿ ಸರೋಜಾದೇವಿ ನಿಧನಕ್ಕೆ ಬೊಮ್ಮಾಯಿ‌ ಸಂತಾಪ
ಬೆಂಗಳೂರು, 14 ಜುಲೈ (ಹಿ.ಸ.) : ಆ್ಯಂಕರ್ : ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ ಎಂದು ಮಾಜಿ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸಂತಾಪ ಸೂಚಿಸಿದ್ದಾರೆ. ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿ ಸುಮಾರು ಏಳು ದಶಕಗಳ ಕಾಲ ಕನ್ನಡ ಚಿತ್ರರಂಗವಷ್ಟೇ ಅ
Sarojadeve


ಬೆಂಗಳೂರು, 14 ಜುಲೈ (ಹಿ.ಸ.) :

ಆ್ಯಂಕರ್ : ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ ಎಂದು ಮಾಜಿ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸಂತಾಪ ಸೂಚಿಸಿದ್ದಾರೆ.

ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿ ಸುಮಾರು ಏಳು ದಶಕಗಳ ಕಾಲ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಹಿಂದಿ, ತೆಲುಗು, ತಮಿಳು ಚಿತ್ರರಂಗದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿ ಭಾರತೀಯ ಚಿತ್ರ ರಂಗದ ಶ್ರೇಷ್ಠ ನಟಿಯರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು.

ಅನೇಕ ಪೌರಾಣಿಕ ಮತ್ತು ಐತಿಹಾಸಿ ಚಿತ್ರಗಳಲ್ಲಿ ನಟಿಸಿದ್ದ ಅವರು ಕನ್ನಡಿಗರ ಮನೆ ಮಾತಾಗಿದ್ದರು. ಅವರು ಕಿತ್ತೂರು ಚೆನ್ನಮ್ಮನ ಪಾತ್ರದಲ್ಲಿ ನಟಿಸಿರುವುದು ಇನ್ನೂ ಎಲ್ಲರ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ಅವರ ಸಾಧನೆಗೆ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಅರಸಿ ಬಂದಿದ್ದವು. ಬಿ. ಸರೋಜಾದೇವಿ ನಿಧನದಿಂದ ಕನ್ನಡ ಚಿತ್ರರಂಗ ಬಡವಾದಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಅವರ ಕುಟುಂಬದವರಿಗೆ ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande